ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.
“ಅವರ ದೇವರುಗಳನ್ನು ಪೂಜಿಸಬೇಡಿರಿ. ಆ ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕ ಸ್ತಂಭಗಳನ್ನು ಕೆಡವಿಹಾಕಬೇಕು.
“ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.
ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.
ಅದೇ ರಾತ್ರಿ ಯೆಹೋವನು ಗಿದ್ಯೋನನೊಂದಿಗೆ ಮಾತನಾಡಿ, “ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನು ಮತ್ತು ಏಳು ವರ್ಷದ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಯು ಸುಳ್ಳುದೇವರಾದ ಬಾಳನಿಗೆ ಕಟ್ಟಿರುವ ಯಜ್ಞವೇದಿಕೆಯನ್ನು ಕೆಡವಿಬಿಡು; ಅದರ ಬಳಿಯಲ್ಲಿರುವ ಅಶೇರ ಎಂಬ ವಿಗ್ರಹಸ್ತಂಭವನ್ನು ಕಡಿದುಹಾಕು.
ಆದರೆ ಅದಕ್ಕೆ ಪ್ರತಿಯಾಗಿ ನೀವು ಈ ಪ್ರದೇಶದಲ್ಲಿ ವಾಸಮಾಡುತ್ತಿರುವ ಜನಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬಾರದು. ಅವರ ಯಜ್ಞವೇದಿಕೆಗಳನ್ನು ನಾಶಮಾಡಬೇಕು’ ಎಂದು ನಾನು ನಿಮಗೆ ಹೇಳಿದ್ದೆ. ಆದರೆ ನೀವು ನನಗೆ ವಿಧೇಯರಾಗಲಿಲ್ಲ.
ಬಳಿಕ ನಿಮ್ಮ ದೇವರಾದ ಯೆಹೋವನಿಗಾಗಿ ಸರಿಯಾದ ಯಜ್ಞವೇದಿಕೆಯನ್ನು ಈ ಗುಡ್ಡದ ಶಿಖರದಲ್ಲಿ ಕಟ್ಟಿಸು. ಆಮೇಲೆ ಆ ಎರಡನೆಯ ಹೋರಿಯನ್ನು ಈ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸು; ಅಶೇರಸ್ತಂಭದ ಕಟ್ಟಿಗೆಯನ್ನು ಈ ಸರ್ವಾಂಗಹೋಮಕ್ಕೆ ಉಪಯೋಗಿಸು” ಎಂದು ಹೇಳಿದನು.
ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.
ಆಸನು ತನ್ನ ತಾಯಿಯಾದ ಮಾಕಳನ್ನು ರಾಜಮಾತೆ ಎಂಬ ಪದವಿಯಿಂದ ತಳ್ಳಿಬಿಟ್ಟನು. ಯಾಕೆಂದರೆ ಆಕೆಯು ಅಶೇರ್ ದೇವತೆಯ ಅಸಹ್ಯವಾದ ಕಂಬವನ್ನು ಮಾಡಿಸಿದ್ದಳು. ಆಸನು ಅದನ್ನು ಕಡಿದು ಚೂರುಚೂರಾಗಿ ಮಾಡಿಸಿದನು. ನಂತರ ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಬಿಟ್ಟನು.
ಅವನ ಹೃದಯವು ಯೆಹೋವನ ಮಾರ್ಗಗಳಲ್ಲಿ ಆನಂದವನ್ನು ಕಂಡುಕೊಂಡಿತು. ಯೆಹೂದ ಪ್ರಾಂತ್ಯದಲ್ಲಿ ವಿಗ್ರಹಗಳ ಪೂಜಾಸ್ಥಳಗಳನ್ನೆಲ್ಲಾ ತೆಗೆದುಹಾಕಿಸಿ ಅಶೇರಸ್ತಂಭಗಳನ್ನು ಕಡಿದುಹಾಕಿಸಿ ಅವುಗಳನ್ನು ನಿರ್ಮೂಲ ಮಾಡಿದನು.
ಅರಸನೂ ಆ ನಾಯಕರುಗಳೂ ದೇವಾಲಯವನ್ನು ನಿರಾಕರಿಸಿ ಅಶೇರ ಸ್ತಂಭಗಳನ್ನೂ ಇತರ ವಿಗ್ರಹಗಳನ್ನೂ ಆರಾಧಿಸಿದರು. ಯೆಹೋವನು ಜೆರುಸಲೇಮಿನ ಮತ್ತು ಯೆಹೂದದ ಜನರ ಮೇಲೆ ಕೋಪಗೊಂಡನು. ಯಾಕೆಂದರೆ ಅರಸನೂ ಆ ನಾಯಕರುಗಳೂ ಯೆಹೋವನ ಮುಂದೆ ದೋಷಿಗಳಾಗಿದ್ದರು.
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.
ಅವರ ಮಕ್ಕಳು ಸುಳ್ಳುದೇವರುಗಳಿಗೆ ಅರ್ಪಿಸಿದ ಯಜ್ಞವೇದಿಕೆಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಅಶೇರಳಿಗೆ ಅರ್ಪಿಸಿದ ಮರದ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಸೊಂಪಾಗಿ ಬೆಳೆದ ಮರದ ಕೆಳಗೆ ಮತ್ತು ಬೆಟ್ಟಗಳ ಮೇಲೆ ಆ ವಸ್ತುಗಳನ್ನು ಜ್ಞಾಪಿಸಿಕೊಳ್ಳುವರು.