ವಿಮೋಚನಕಾಂಡ 34:15 - ಪರಿಶುದ್ದ ಬೈಬಲ್15 “ಎಚ್ಚರಿಕೆಯಾಗಿರಿ, ಆ ದೇಶದಲ್ಲಿ ವಾಸಿಸುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ನೀವು ಅವರೊಂದಿಗೆ ಸೇರಿಕೊಳ್ಳುವಿರಿ. ಅವರೊಂದಿಗೆ ಸೇರಿಕೊಳ್ಳುವಂತೆ ನಿಮ್ಮನ್ನು ಆಹ್ವಾನಿಸುವರು; ಅವರ ಯಜ್ಞಾರ್ಪಣೆಗಳನ್ನು ತಿನ್ನುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀವು ಆ ನಾಡಿನ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಜಾಗರೂಕರಾಗಿರಿ. ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಬಲಿಯರ್ಪಿಸುವಾಗ ಬಲಿ ಭೋಜನಕ್ಕೆ ನಿಮ್ಮನ್ನು ಕರೆಯಬಹುದು. ನೀವು ಹೋಗಿ ಅದನ್ನು ಭುಜಿಸುವ ಸಂಭವವುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞ ಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡೀರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ನೀನು ಆ ದೇಶದ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಎಚ್ಚರದಿಂದಿರು. ಅವರು ಅನ್ಯದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞ ಅರ್ಪಿಸುವ ಸಮಯದಲ್ಲಿ ಒಬ್ಬನು ನಿನ್ನನ್ನು ಕರೆದಾನು, ನೀನು ಅವನ ಯಜ್ಞಭೋಜನವನ್ನು ಮಾಡಬೇಕಾದೀತು. ಅಧ್ಯಾಯವನ್ನು ನೋಡಿ |
ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.
ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.