ವಿಮೋಚನಕಾಂಡ 34:18 - ಪರಿಶುದ್ದ ಬೈಬಲ್18 “ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಿರಿ. ನಾನು ನಿಮಗೆ ಮೊದಲು ಆಜ್ಞಾಪಿಸಿದಂತೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಿರಿ. ನಾನು ಆರಿಸಿಕೊಂಡ ಅಬೀಬ್ ಮಾಸದಲ್ಲಿ ಇದನ್ನು ಮಾಡಿರಿ. ಯಾಕೆಂದರೆ ಆ ತಿಂಗಳಲ್ಲಿ ನೀವು ಈಜಿಪ್ಟಿನಿಂದ ಬಿಡುಗಡೆ ಹೊಂದಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬಗಳನ್ನು ಆಚರಿಸಿರಿ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನಿಯಮಿತ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಚೈತ್ರಮಾಸದಲ್ಲಿ ಈಜಿಪ್ಟಿನಿಂದ ಬಿಡುಗಡೆಯಾಗಿ ಹೊರಬಂದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರ ಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರ ಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರ ಮಾಸದ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನೀವು ಈಜಿಪ್ಟ್ ದೇಶವನ್ನು ಬಿಟ್ಟು ಬಂದಿದ್ದೀರಿ. ಅಧ್ಯಾಯವನ್ನು ನೋಡಿ |
ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.