ವಿಮೋಚನಕಾಂಡ 34:20 - ಪರಿಶುದ್ದ ಬೈಬಲ್20 ಚೊಚ್ಚಲಾಗಿ ಹುಟ್ಟಿದ ಕತ್ತೆಯನ್ನು ನೀವು ಇಟ್ಟುಕೊಳ್ಳಲು ಬಯಸಿದರೆ, ಆಗ ನೀವು ಕುರಿಮರಿಯನ್ನು ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಆದರೆ ನೀವು ಅದನ್ನು ಕೊಂಡುಕೊಳ್ಳದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಂದುಬಿಡಬೇಕು. ನೀವು ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನನ್ನಿಂದ ಕೊಂಡುಕೊಳ್ಳಬೇಕು. ಯಾವ ವ್ಯಕ್ತಿಯೂ ಕಾಣಿಕೆಯಿಲ್ಲದೆ, ನನ್ನ ಸನ್ನಿಧಿಗೆ ಬರಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು. ಹಾಗೆ ಬಿಡಿಸಲಾಗದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಗುವನ್ನು ಕೊಲ್ಲದೆ, ಬದಲುಕೊಟ್ಟು ಬಿಡಿಸಲೇಬೇಕು. ಯಾರೂ ಬರೀಗೈಯಲ್ಲಿ ನನ್ನ ಮುಂದೆ ಕಾಣಿಸಿಕೊಳ್ಳಬಾರದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಗುವನ್ನು ಕೊಲ್ಲದೆ ಬದಲು ಕೊಟ್ಟು ಬಿಡಿಸಲೇಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕತ್ತೆಮರಿಗೆ ಬದಲಾಗಿ ಕುರಿಮರಿಯನ್ನು ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ, ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಪುತ್ರರಲ್ಲಿ ಚೊಚ್ಚಲಾದವರನ್ನೆಲ್ಲಾ ವಿಮೋಚಿಸಬೇಕು. “ನನ್ನ ಮುಂದೆ ಯಾರೂ ಬರಿಗೈಯಿಂದ ಕಾಣಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿ |
ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.
ಈಜಿಪ್ಟಿನಲ್ಲಿ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡು ನಮ್ಮನ್ನು ಕಳುಹಿಸಿಕೊಡಲಿಲ್ಲ. ಆಗ ಯೆಹೋವನು ಆ ದೇಶದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. (ಯೆಹೋವನು ಚೊಚ್ಚಲು ಪಶುಗಳನ್ನು ಮತ್ತು ಚೊಚ್ಚಲು ಗಂಡುಮಕ್ಕಳನ್ನು ಕೊಂದನು.) ಆದ್ದರಿಂದ ನಾವು ಚೊಚ್ಚಲಾದ ಪ್ರತಿಯೊಂದು ಗಂಡುಪಶುವನ್ನು ಯೆಹೋವನಿಗೆ ಯಜ್ಞವಾಗಿ ಅರ್ಪಿಸುತ್ತೇವೆ. ಈ ಕಾರಣದಿಂದಲೇ, ನಮ್ಮ ಪ್ರತಿಯೊಂದು ಗಂಡುಮಗುವನ್ನು ಯೆಹೋವನಿಂದ ಮತ್ತೆ ಖರೀದಿ ಮಾಡುತ್ತೇವೆ’ ಎಂದು ಹೇಳುವಿರಿ.