ವಿಮೋಚನಕಾಂಡ 34:25 - ಪರಿಶುದ್ದ ಬೈಬಲ್25 “ನೀವು ಯಜ್ಞಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಬಾರದು; “ಪಸ್ಕ ಭೋಜನದ ಮಾಂಸದಲ್ಲಿ ಏನನ್ನೂ ಮರುದಿನದ ಮುಂಜಾನೆಯವರೆಗೆ ಉಳಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದ ಸೂರ್ಯೋದಯದವರೆಗೂ ಉಳಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನನಗೆ ಬಲಿಯರ್ಪಿಸುವಾಗ ಆ ಬಲಿಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸುವ ಬಲಿ ಮಾಂಸವನ್ನು ಮರುದಿನದವರೆಗೂ ಉಳಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದವರೆಗೂ ಉಳಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕಹಬ್ಬದ ಬಲಿಯಲ್ಲಿ ಯಾವುದೂ ಬೆಳಗಿನವರೆಗೆ ಉಳಿಸಬಾರದು. ಅಧ್ಯಾಯವನ್ನು ನೋಡಿ |
ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.