Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:29 - ಪರಿಶುದ್ದ ಬೈಬಲ್‌

29 ತರುವಾಯ ಮೋಶೆಯು ಸೀನಾಯಿ ಬೆಟ್ಟದಿಂದ ಇಳಿದು ಬಂದನು. ಒಡಂಬಡಿಕೆಯ ವಾಕ್ಯಗಳು ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಅವನು ಹಿಡಿದುಕೊಂಡಿದ್ದನು. ಯೆಹೋವನು ಅವನೊಡನೆ ಮಾತಾಡಿದ್ದರಿಂದ ಅವನ ಮುಖವು ಹೊಳೆಯುತ್ತಿತ್ತು. ಆದರೆ ಮೋಶೆಗೆ ಇದು ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆಯು ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದುಬಂದಾಗ ಅವನು ಯೆಹೋವನ ಸನ್ನಿಧಿಯಲ್ಲಿ ಇದ್ದು ಆತನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಅ ಪ್ರಭಾವವು ಅವನಿಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮೋಶೆ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದು ಬಂದಾಗ ಅವನ ಮುಖ ಪ್ರಕಾಶಮಾನವಾಗಿತ್ತು. ಏಕೆಂದರೆ ಅವನು ಸರ್ವೇಶ್ವರನ ಸಂಗಡ ಸಂಭಾಷಿಸಿದ್ದನು. ಆದರೆ ಅದು ಅವನಿಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೋಶೆ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದು ಬಂದಾಗ ಅವನು ಯೆಹೋವನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಆ ಸಂಗತಿ ಅವನಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ, ಅವನು ಯೆಹೋವ ದೇವರ ಸಂಗಡ ಬೆಟ್ಟದಲ್ಲಿ ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿಸುತ್ತದೆಂದು ಬೆಟ್ಟದಿಂದ ಇಳಿದಾಗ ಮೋಶೆಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:29
22 ತಿಳಿವುಗಳ ಹೋಲಿಕೆ  

ಈ ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು.


ಯೇಸು ಪ್ರಾರ್ಥಿಸುತ್ತಿದ್ದಾಗ, ಆತನ ಮುಖವು ರೂಪಾಂತರವಾಯಿತು. ಆತನ ಬಟ್ಟೆಗಳು ಬೆಳ್ಳಗೆ ಹೊಳೆಯತೊಡಗಿದವು.


ಬಳಿಕ ಮೋಶೆ ಬೆಟ್ಟದಿಂದಿಳಿದು ಬಂದನು. ಮೋಶೆಯೊಡನೆ ಆಜ್ಞಾಶಾಸನಗಳ ಎರಡು ಕಲ್ಲಿನ ಹಲಿಗೆಗಳಿದ್ದವು. ಈ ಆಜ್ಞಾಶಾಸನಗಳ ಕಲ್ಲುಗಳ ಮುಂದೆಯೂ ಹಿಂದೆಯೂ ಬರೆಯಲ್ಪಟ್ಟಿದ್ದವು.


ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ನಾವು ಮೋಶೆಯಂತಿಲ್ಲ. ಕುಂದಿ ಹೋಗುವ ಮಹಿಮೆಯು ಅಂತ್ಯಗೊಳ್ಳುವುದನ್ನು ಇಸ್ರೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಂಡನು.


ನಂತರ ಮತ್ತೊಬ್ಬ ಬಲಿಷ್ಠನಾದ ದೇವದೂತನೊಬ್ಬನು ಪರಲೋಕದಿಂದ ಇಳಿದುಬರುವುದನ್ನು ನಾನು ನೋಡಿದೆನು. ಆ ದೇವದೂತನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಸುತ್ತಲೂ ಕಾಮನಬಿಲ್ಲಿತ್ತು. ಆ ದೇವದೂತನ ಮುಖವು ಸೂರ್ಯನಂತೆಯೂ ಅವನ ಕಾಲುಗಳು ಬೆಂಕಿಯ ಕಂಬಗಳಂತೆಯೂ ಇದ್ದವು.


ಸಭೆಯಲ್ಲಿ ಕುಳಿತಿದ್ದವರೆಲ್ಲರೂ ಸ್ತೆಫನನ ಮುಖವನ್ನು ದಿಟ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಕಂಗೊಳಿಸಿತು.


ಆದರೆ ಗುಣಹೊಂದಿದ್ದ ವ್ಯಕ್ತಿಗೆ ತನ್ನನ್ನು ಗುಣಪಡಿಸಿದವನು ಯಾರೆಂಬುದು ಗೊತ್ತಿರಲಿಲ್ಲ. ಆ ಸ್ಥಳದಲ್ಲಿ ಅನೇಕ ಜನರಿದ್ದರು. ಯೇಸು ಆ ಸ್ಥಳದಿಂದ ನುಸುಳಿಕೊಂಡು ಹೊರಟುಹೋದನು.


ದೇವದೂತನು ಹೊರಗೆ ಹೋದನು. ಪೇತ್ರನು ಅವನನ್ನು ಹಿಂಬಾಲಿಸಿದನು. ದೇವದೂತನು ನಿಜವಾಗಿಯೂ ಹೀಗೆ ಮಾಡುತ್ತಿದ್ದಾನೆಂಬುದು ಪೇತ್ರನಿಗೆ ತಿಳಿದಿರಲಿಲ್ಲ. ತಾನು ಕನಸು ಕಾಣುತ್ತಿರಬಹುದೆಂದು ಅವನು ಯೋಚಿಸಿಕೊಂಡನು.


ಪೌಲನು, “ಸಹೋದರರೇ, ಈ ಮನುಷ್ಯನು ಪ್ರಧಾನಯಾಜಕನೆಂದು ನನಗೆ ಗೊತ್ತಿರಲ್ಲಿಲ್ಲ. ‘ನಿಮ್ಮ ಜನನಾಯಕರ ಬಗ್ಗೆ ಕೆಟ್ಟಮಾತುಗಳುನ್ನು ಆಡಬಾರದು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ” ಎಂದು ಹೇಳಿದನು.


ಯೇಸು ಅವರಿಗೆ, “ನೀವು ನನಗೋಸ್ಕರ ಏಕೆ ಹುಡುಕಬೇಕಿತ್ತು? ನನ್ನ ತಂದೆಯ (ದೇವರ) ಕೆಲಸ ಎಲ್ಲಿರುತ್ತದೋ ಅಲ್ಲಿ ನಾನು ಇರಬೇಕು ಎಂಬುದನ್ನು ನೀವು ತಿಳಿದಿರಬೇಕಾಗಿತ್ತು!” ಎಂದು ಹೇಳಿದನು.


ಪೇತ್ರನಿಗೆ ಏನು ಹೇಳಬೇಕೋ ತಿಳಿಯಲಿಲ್ಲ. ಏಕೆಂದರೆ ಅವನು ಮತ್ತು ಉಳಿದ ಇನ್ನಿಬ್ಬರು ಶಿಷ್ಯರು ಬಹಳ ಭಯಗೊಂಡಿದ್ದರು.


ಆಮೇಲೆ ದೆಲೀಲಳು ಅವನನ್ನು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತನು. “ಮುಂಚಿನಂತೆಯೇ ನಾನು ತಪ್ಪಿಸಿಕೊಳ್ಳುವೆನು” ಎಂದು ಅವನು ತಿಳಿದಿದ್ದನು. ಆದರೆ ಯೆಹೋವನು ಅವನನ್ನು ಬಿಟ್ಟುಹೋಗಿದ್ದಾನೆಂಬುದು ಅವನಿಗೆ ಗೊತ್ತಾಗಲಿಲ್ಲ.


ತರುವಾಯ “ಆಯಿ”ಯ ಅರಸನು ಇಸ್ರೇಲರ ಸೈನ್ಯವನ್ನು ನೋಡಿದನು. ಅರಸನು ಮತ್ತು ಅವನ ಜನರು ಇಸ್ರೇಲರ ಸೈನ್ಯದೊಂದಿಗೆ ಯುದ್ಧಮಾಡಿ ಮುಗಿಸುವುದಕ್ಕಾಗಿ ತ್ವರೆಮಾಡಿ ಹೊರಟರು. “ಆಯಿ”ಯ ಅರಸನು ಪಟ್ಟಣದ ಪೂರ್ವಕ್ಕೆ ಹೋದನು. ಆದ್ದರಿಂದ ಅವನು ಪಟ್ಟಣದ ಹಿಂಭಾಗದಲ್ಲಿ ಅಡಗಿದ್ದ ಸೈನಿಕರನ್ನು ನೋಡಲಿಲ್ಲ.


ರಾಹಾಬಳು ಈ ಇಬ್ಬರನ್ನು ಅಡಗಿಸಿಟ್ಟಿದ್ದಳು. ಆದರೆ ಆಕೆಯು ಕೇಳಬಂದವರಿಗೆ, “ಇಬ್ಬರು ಮನುಷ್ಯರು ಇಲ್ಲಿಗೆ ಬಂದಿದ್ದರು, ಆದರೆ ಅವರು ಎಲ್ಲಿಂದ ಬಂದಿದ್ದರೆಂಬುದು ನನಗೆ ಗೊತ್ತಿರಲಿಲ್ಲ.


ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿ ಬಂದಾಗ ಅವರು ನಿದ್ರಿಸುತ್ತಿರುವುದನ್ನು ಕಂಡನು. ಅವರ ಕಣ್ಣುಗಳು ಬಹಳ ಆಯಾಸಗೊಂಡಿದ್ದವು. ಯೇಸುವಿಗೆ ಏನು ಹೇಳಬೇಕೆಂದು ಆ ಶಿಷ್ಯರಿಗೆ ತಿಳಿಯಲಿಲ್ಲ.


ಇಸ್ರೇಲರು ಅದನ್ನು ನೋಡಿ “ಏನದು” ಎಂಬುದಾಗಿ ಒಬ್ಬರನ್ನೊಬ್ಬರು ಕೇಳಿದರು. ಅದು ಏನೆಂದು ಅವರಿಗೆ ಗೊತ್ತಿಲ್ಲದ ಕಾರಣ ಅವರು ಈ ಪ್ರಶ್ನೆಯನ್ನು ಕೇಳಿದರು. ಆದ್ದರಿಂದ ಮೋಶೆ ಅವರಿಗೆ, “ಇದು ಯೆಹೋವನು ನಿಮಗೆ ಕೊಟ್ಟಿರುವ ಆಹಾರ.


ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು.


ನಾನು ಬೆಟ್ಟದಿಂದಿಳಿದು ಆ ಕಲ್ಲಿನ ಹಲಗೆಗಳನ್ನು ಯೆಹೋವನ ಅಪ್ಪಣೆಯಂತೆ ನಾನು ಮಾಡಿದ ಪೆಟ್ಟಿಗೆಯೊಳಗಿಟ್ಟೆನು. ಆ ಕಲ್ಲಿನ ಹಲಗೆಗಳು ಈಗಲೂ ಇವೆ.”


ಜ್ಞಾನಿಯು ವಿಷಯಗಳನ್ನು ಅರ್ಥಮಾಡಿಕೊಳ್ಳುವಂತೆ ಮತ್ತು ವಿವರಿಸುವಂತೆ ಬೇರೆ ಯಾರೂ ಅರ್ಥಮಾಡಿಕೊಳ್ಳಲಾರರು ಮತ್ತು ವಿವರಿಸಲಾರರು. ಜ್ಞಾನಿಯ ಮುಖವು ಜ್ಞಾನದಿಂದ ಪ್ರಕಾಶಮಾನವಾಗಿರುವುದು; ಅದು ವ್ಯಸನದ ಮುಖವನ್ನು ಸಂತೋಷದ ಮುಖವನ್ನಾಗಿ ಮಾರ್ಪಡಿಸುವುದು.


ಮೋಶೆಯ ಮುಖವು ಶುಭ್ರವಾಗಿ ಹೊಳೆಯುತ್ತಿದ್ದುದನ್ನು ಜನರು ನೋಡಿದರು. ಆದ್ದರಿಂದ ಮೋಶೆಯು ಮುಂದಿನ ಸಾರಿ ಯೆಹೋವನೊಡನೆ ಮಾತಾಡಲು ಹೋಗುವವರೆಗೆ ತನ್ನ ಮುಖಕ್ಕೆ ಮುಸುಕು ಹಾಕಿಕೊಂಡಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು