Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:31 - ಪರಿಶುದ್ದ ಬೈಬಲ್‌

31 ಆದರೆ ಮೋಶೆ ಅವರನ್ನು ಕರೆದನು. ಆದ್ದರಿಂದ ಆರೋನನೂ ಜನನಾಯಕರೆಲ್ಲರೂ ಮೋಶೆಯ ಬಳಿಗೆ ಹೋದರು. ಮೋಶೆಯು ಅವರೊಡನೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ಮೋಶೆಯು ಅವರನ್ನು ಕರೆಯಲು ಆರೋನನೂ ಸಮೂಹದ ನಾಯಕರೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದರೆ ಮೋಶೆ ಅವರನ್ನು ಕರೆದನು. ಆಗ ಆರೋನನು ಹಾಗು ಜನನಾಯಕರೆಲ್ಲರು ಅವನ ಬಳಿಗೆ ಬಂದರು. ಆಗ ಮೋಶೆ ಅವರ ಸಂಗಡ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ಮೋಶೆ ಅವರನ್ನು ಕರೆಯಲು ಆರೋನನೂ ಸಮೂಹದ ಅಧಿಪತಿಗಳೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಮೋಶೆಯು ಅವರನ್ನು ಕರೆದಾಗ, ಆರೋನನು ಮತ್ತು ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರುಗಿ ಬಂದರು. ಆಗ ಮೋಶೆಯು ಅವರ ಸಂಗಡ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:31
7 ತಿಳಿವುಗಳ ಹೋಲಿಕೆ  

ಇದಲ್ಲದೆ ದೇವರು ಮೋಶೆಗೆ, “ನೀನು ಇಸ್ರೇಲರಿಗೆ, ‘ನಿಮ್ಮ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವನು ನಿಮ್ಮಲ್ಲಿಗೆ ನನ್ನನ್ನು ಕಳುಹಿಸಿದ್ದಾನೆ. ಇದೇ ನನ್ನ ಶಾಶ್ವತವಾದ ಹೆಸರು; ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು ಇದೇ ಎಂದು ಹೇಳಬೇಕು’” ಅಂದನು.


ಆಮೇಲೆ ಯೋಸೇಫನು ತನ್ನ ಎಲ್ಲಾ ಸಹೋದರರಿಗೂ ಮುದ್ದಿಟ್ಟು ಅತ್ತನು. ಇದಾದ ಮೇಲೆ ಆ ಸಹೋದರರು ಅವನೊಂದಿಗೆ ಮಾತಾಡತೊಡಗಿದರು.


ಯೋಸೇಫನು ತನ್ನ ಸಹೋದರರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನನ್ನ ತಂದೆ ಚೆನ್ನಾಗಿದ್ದಾನೆಯೇ?” ಎಂದು ಕೇಳಿದನು. ಆದರೆ ಸಹೋದರರು ಅವನಿಗೆ ಉತ್ತರಿಸಲಿಲ್ಲ. ಅವರಿಗೆ ಭಯವಾಗಿತ್ತು ಮತ್ತು ಗಲಿಬಿಲಿಗೊಂಡಿದ್ದರು.


ಆರನೆಯ ದಿನವಾದ ಶುಕ್ರವಾರದಲ್ಲಿ ಜನರು ಎರಡರಷ್ಟನ್ನು ಕೂಡಿಸಿಕೊಂಡರು. ಅವರು ಪ್ರತಿಯೊಬ್ಬನಿಗೆ ಆರು ಸೇರಿನಷ್ಟು ಕೂಡಿಸಿಕೊಂಡರು. ಆದ್ದರಿಂದ ಜನನಾಯಕರೆಲ್ಲರೂ ಬಂದು ಮೋಶೆಗೆ ಇದನ್ನು ತಿಳಿಸಿದರು.


ಮೋಶೆಯ ಮುಖವು ಶುಭ್ರವಾಗಿ ಹೊಳೆಯುತ್ತಿರುವುದನ್ನು ಆರೋನನೂ ಇಸ್ರೇಲರೆಲ್ಲರೂ ನೋಡಿದರು. ಆದ್ದರಿಂದ ಅವನ ಬಳಿಗೆ ಹೋಗಲು ಅವರು ಭಯಪಟ್ಟರು.


ಅದಾದನಂತರ, ಇಸ್ರೇಲರೆಲ್ಲರೂ ಮೋಶೆಯ ಬಳಿಗೆ ಬಂದರು. ಯೆಹೋವನು ಸೀನಾಯಿ ಬೆಟ್ಟದಲ್ಲಿ ತನಗೆ ಕೊಟ್ಟ ಆಜ್ಞೆಗಳನ್ನು ಮೋಶೆಯು ಅವರಿಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು