Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:32 - ಪರಿಶುದ್ದ ಬೈಬಲ್‌

32 ಅದಾದನಂತರ, ಇಸ್ರೇಲರೆಲ್ಲರೂ ಮೋಶೆಯ ಬಳಿಗೆ ಬಂದರು. ಯೆಹೋವನು ಸೀನಾಯಿ ಬೆಟ್ಟದಲ್ಲಿ ತನಗೆ ಕೊಟ್ಟ ಆಜ್ಞೆಗಳನ್ನು ಮೋಶೆಯು ಅವರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆಯು ತಾನು ಸೀನಾಯಿಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅನಂತರ ಇಸ್ರಯೇಲರೆಲ್ಲರು ಕೂಡ ಹತ್ತಿರಕ್ಕೆ ಬಂದರು. ಮೋಶೆ ತಾನು ಸೀನಾಯಿ ಬೆಟ್ಟದಲ್ಲಿ ಸರ್ವೇಶ್ವರನಿಂದ ಹೊಂದಿದ ಆಜ್ಞೆಗಳನ್ನೆಲ್ಲ ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತರುವಾಯ ಇಸ್ರಾಯೇಲ್ಯರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆ ತಾನು ಸೀನಾಯಿ ಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರ ಬಂದರು. ಆಗ ಅವನು ಅವರಿಗೆ, ಯೆಹೋವ ದೇವರು ತನಗೆ ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳನ್ನೆಲ್ಲಾ ಆಜ್ಞಾಪಿಸಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:32
10 ತಿಳಿವುಗಳ ಹೋಲಿಕೆ  

ನಾನು ಸ್ವೀಕರಿಸಿಕೊಂಡ ಸಂದೇಶವನ್ನು ನಾನು ನಿಮಗೆ ತಿಳಿಸಿದೆನು. ಆ ಸಂಗತಿಗಳು ಬಹಳ ಮುಖ್ಯವಾದುವುಗಳಾಗಿವೆ. ಪವಿತ್ರ ಗ್ರಂಥವು ಹೇಳುವಂತೆ, ಕ್ರಿಸ್ತನು ನಮ್ಮ ಪಾಪಗಳಿಗೋಸ್ಕರವಾಗಿ ಸತ್ತು


ನಾನು ಪ್ರಭುವಿನಿಂದ ಹೊಂದಿಕೊಂಡದ್ದನ್ನೇ ನಿಮಗೆ ಉಪದೇಶಿಸಿದೆನು. ಅದೇನೆಂದರೆ: ಯೇಸುವನ್ನು ಕೊಲ್ಲುವುದಕ್ಕಾಗಿ ಒಪ್ಪಿಸಿಕೊಟ್ಟ ರಾತ್ರಿಯಲ್ಲಿ, ಆತನು ರೊಟ್ಟಿಯನ್ನು ತೆಗೆದುಕೊಂಡು,


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಆದರೆ ಮೀಕಾಯೆಹುವು, “ಇಲ್ಲ! ಯೆಹೋವನಾಣೆ, ಆತನು ತಿಳಿಸುವುದನ್ನೇ ನಾನು ಹೇಳುತ್ತೇನೆ” ಎಂದು ಉತ್ತರಿಸಿದನು.


ನೀವು ನನ್ನ ಎಲ್ಲಾ ಆಜ್ಞೆಗಳನ್ನು ಜ್ಞಾಪಿಸಿಕೊಂಡು ವಿಧೇಯರಾಗಿರಬೇಕು. ಆಗ ನೀವು ನಿಮ್ಮ ದೇವರ ವಿಶೇಷವಾದ ಜನರಾಗಿರುವಿರಿ.


ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು.


ಬಳಿಕ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರಿಗೆ ನೇಮಿಸಬೇಕಾದ ಇತರ ಕಟ್ಟಳೆಗಳು ಯಾವುವೆಂದರೆ:


ಆದರೆ ಮೋಶೆ ಅವರನ್ನು ಕರೆದನು. ಆದ್ದರಿಂದ ಆರೋನನೂ ಜನನಾಯಕರೆಲ್ಲರೂ ಮೋಶೆಯ ಬಳಿಗೆ ಹೋದರು. ಮೋಶೆಯು ಅವರೊಡನೆ ಮಾತಾಡಿದನು.


ಮೋಶೆಯು ಜನರೊಡನೆ ಮಾತಾಡಿ ಮುಗಿಸಿದಾಗ, ತನ್ನ ಮುಖದ ಮೇಲೆ ಮುಸುಕನ್ನು ಹಾಕಿಕೊಂಡನು.


ಮೋಶೆಯು ಇಸ್ರೇಲರನ್ನು ಒಟ್ಟಾಗಿ ಸೇರಿಸಿದನು. ಮೋಶೆ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ ಸಂಗತಿಗಳನ್ನು ನಾನು ಹೇಳುವೆನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು