ವಿಮೋಚನಕಾಂಡ 34:5 - ಪರಿಶುದ್ದ ಬೈಬಲ್5 ಮೋಶೆಯು ಬೆಟ್ಟವನ್ನೇರಿ ಹೋದನಂತರ ಯೆಹೋವನು ಮೇಘದಲ್ಲಿ ಅವನ ಬಳಿಗೆ ಇಳಿದುಬಂದನು. ಯೆಹೋವನು ಮೋಶೆಯೊಡನೆ ಅಲ್ಲಿ ನಿಂತನು ಮತ್ತು ಮೋಶೆಯು ಯೆಹೋವನ ಹೆಸರನ್ನು ಕರೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಸರ್ವೇಶ್ವರ ಸ್ವಾಮಿ ಮೇಘಾವೃತರಾಗಿ ಇಳಿದುಬಂದು ಅಲ್ಲಿ ಅವನ ಹತ್ತಿರ ನಿಂತು, ‘ಸರ್ವೇಶ್ವರ’ ಎಂಬ ತಮ್ಮ ನಾಮವನ್ನು ಪ್ರಕಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಯೆಹೋವನು ಮೇಘದಿಂದ ಆವರಿಸಲ್ಪಟ್ಟವನಾಗಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ನಾಮವನ್ನು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಯೆಹೋವ ದೇವರು ಮೇಘದಲ್ಲಿ ಇಳಿದುಬಂದು ಅಲ್ಲಿ ಅವನ ಸಂಗಡ ನಿಂತುಕೊಂಡು, ಯೆಹೋವ ದೇವರು ತಮ್ಮ ಹೆಸರನ್ನು ಪ್ರಕಟಮಾಡಿದರು. ಅಧ್ಯಾಯವನ್ನು ನೋಡಿ |