ವಿಮೋಚನಕಾಂಡ 34:6 - ಪರಿಶುದ್ದ ಬೈಬಲ್6 ಯೆಹೋವನು ಮೋಶೆಯ ಮುಂದೆ ಹಾದುಹೋಗುತ್ತಾ, “ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳ ದೇವರಾಗಿದ್ದಾನೆ. ಯೆಹೋವನು ಕೋಪಗೊಳ್ಳುವುದರಲ್ಲಿ ನಿಧಾನವಾಗಿದ್ದಾನೆ. ಯೆಹೋವನು ಮಹಾ ಪ್ರೀತಿಸ್ವರೂಪನಾಗಿದ್ದಾನೆ. ಯೆಹೋವನು ಭರವಸೆಗೆ ಯೋಗ್ಯನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರು ಅವನೆದುರಿಗೆ ಹಾದು ಹೋಗಿ, “ಯೆಹೋವ ದೇವರು, ಯೆಹೋವ ದೇವರು, ಕರುಣಾಳುವು, ಕೃಪಾಳುವು, ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಅಧ್ಯಾಯವನ್ನು ನೋಡಿ |
ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.
ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.
ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.