ವಿಮೋಚನಕಾಂಡ 34:7 - ಪರಿಶುದ್ದ ಬೈಬಲ್7 ಯೆಹೋವನು ಸಾವಿರಾರು ತಲೆಗಳವರೆಗೆ ತನ್ನ ದಯೆ ತೋರಿಸುತ್ತಾನೆ. ಜನರು ಮಾಡುವ ಪಾಪಗಳನ್ನು ಯೆಹೋವನು ಕ್ಷಮಿಸುತ್ತಾನೆ. ಆದರೆ ಅಪರಾಧಿಗಳನ್ನು ಶಿಕ್ಷಿಸುವುದಕ್ಕೆ ಆತನು ಮರೆಯುವುದಿಲ್ಲ. ಯೆಹೋವನು ಅಪರಾಧಿಗಳನ್ನು ಶಿಕ್ಷಿಸುವನು ಮತ್ತು ಅವರ ಅಪರಾಧದ ಫಲವು ಅವರ ಮಕ್ಕಳ ಮೇಲೂ ಮೊಮ್ಮಕ್ಕಳ ಮೇಲೂ ಮತ್ತು ಮರಿಮೊಮ್ಮಕ್ಕಳ ಮೇಲೂ ಬರುವಂತೆ ಮಾಡುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸಾವಿರಾರು ತಲೆಗಳವರೆಗೂ ದಯೆತೋರಿಸುವವನು; ದೋಷಾಪರಾಧಪಾಪಗಳನ್ನು ಕ್ಷವಿುಸುವವನು; ಆದರೂ [ಅಪರಾಧಗಳನ್ನು] ಶಿಕ್ಷಿಸದೆ ಬಿಡದವನು; ತಂದೆಗಳ ದೋಷ ಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸಾವಿರ ತಲೆಗಳವರೆಗೂ ಕರುಣೆ ತೋರಿಸುವಾತನು. ದೋಷವನ್ನು, ಅಪರಾಧವನ್ನು, ಪಾಪವನ್ನು ಕ್ಷಮಿಸುವಾತನು ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನು,” ಎಂದು ಪ್ರಕಟಿಸಿಕೊಂಡರು. ಅಧ್ಯಾಯವನ್ನು ನೋಡಿ |
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.
ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”