Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:9 - ಪರಿಶುದ್ದ ಬೈಬಲ್‌

9 ಮೋಶೆಯು, “ಯೆಹೋವನೇ, ನಿನ್ನ ದಯೆ ನನಗೆ ದೊರಕುವುದಾದರೆ, ದಯವಿಟ್ಟು ನಮ್ಮೊಂದಿಗೆ ಬಾ. ಇವರು ಅವಿಧೇಯರಾದ ಜನರೆಂದು ನಾನು ಬಲ್ಲೆನು. ಆದರೆ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ನಿನ್ನ ಜನರನ್ನಾಗಿ ಸ್ಪೀಕರಿಸು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನೇ, ನಿನ್ನ ಅನುಗ್ರಹವು ನನಗೆ ದೊರಕಿದ್ದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷವಿುಸಿ ನಿನ್ನ ಜನರಾಗುವಂತೆ ನಮ್ಮನ್ನು ಸ್ವೀಕರಿಸಬೇಕೆಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:9
23 ತಿಳಿವುಗಳ ಹೋಲಿಕೆ  

ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕೆಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.


ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ. ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ.


ಯೆಹೋವನ ಪಾಲು ಆತನ ಜನರೇ. ಇಸ್ರೇಲನ ವಂಶಸ್ಥರು ದೇವಜನರಾಗಿದ್ದಾರೆ.


ಯೆಹೋವನು ಯಾಕೋಬನನ್ನು ಆರಿಸಿಕೊಂಡನು. ಇಸ್ರೇಲ್, ಆತನಿಗೆ ಸೇರಿದ್ದು.


ಯೆಹೋವನೇ, ನಿನ್ನ ಜನರನ್ನು ರಕ್ಷಿಸು, ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.


ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. ಇಸ್ರೇಲು ಆತನ ಸ್ವಾಸ್ತ್ಯವಾದ ಜನಾಂಗ. “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ.


ಯೆಹೋವನು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಅವರು ಬಹಳ ಮೊಂಡರೆಂದು ನಾನು ಬಲ್ಲೆನು. ಅವರು ಯಾವಾಗಲೂ ನಿನಗೆ ವಿರೋಧವಾಗಿ ದಂಗೆ ಏಳುವರು.


ಯೆಹೋವನು ತಿರುಗಿ ಜೆರುಸಲೇಮನ್ನು ತನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವನು. ಯೆಹೂದವು ಆ ಪವಿತ್ರ ದೇಶದಲ್ಲಿರುವ ಆತನ ಪಾಲು.


ಆತನು ತನ್ನ ಜನರಿಗೆ ವಿರೋಧವಾಗಿ ತನ್ನ ಕೋಪವನ್ನು ತೋರಿದನು. ಯುದ್ಧದಲ್ಲಿ ಅವರಿಗೆ ಮರಣವಾಗುವಂತೆ ಮಾಡಿದನು.


ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.


ಯೆಹೋವನೇ, ನಾನು ಅನೇಕ ಪಾಪಗಳನ್ನು ಮಾಡಿದ್ದೇನೆ. ಆದರೆ ನೀನು ನಿನ್ನ ಹೆಸರಿನ ನಿಮಿತ್ತ ಅವುಗಳನ್ನೆಲ್ಲಾ ಕ್ಷಮಿಸಿಬಿಟ್ಟೆ.


ನಾವು ಈಜಿಪ್ಟಿನಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.


ಯೆಹೋವನು ಸಾವಿರಾರು ತಲೆಗಳವರೆಗೆ ತನ್ನ ದಯೆ ತೋರಿಸುತ್ತಾನೆ. ಜನರು ಮಾಡುವ ಪಾಪಗಳನ್ನು ಯೆಹೋವನು ಕ್ಷಮಿಸುತ್ತಾನೆ. ಆದರೆ ಅಪರಾಧಿಗಳನ್ನು ಶಿಕ್ಷಿಸುವುದಕ್ಕೆ ಆತನು ಮರೆಯುವುದಿಲ್ಲ. ಯೆಹೋವನು ಅಪರಾಧಿಗಳನ್ನು ಶಿಕ್ಷಿಸುವನು ಮತ್ತು ಅವರ ಅಪರಾಧದ ಫಲವು ಅವರ ಮಕ್ಕಳ ಮೇಲೂ ಮೊಮ್ಮಕ್ಕಳ ಮೇಲೂ ಮತ್ತು ಮರಿಮೊಮ್ಮಕ್ಕಳ ಮೇಲೂ ಬರುವಂತೆ ಮಾಡುವನು” ಎಂದು ಹೇಳಿದನು.


ಆದರೆ ಯೆಹೋವನು ನಿಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡಿಕೊಂಡಿರುತ್ತಾನೆ. ಕಬ್ಬಿಣವನ್ನು ಕರಗಿಸುವ ಬೆಂಕಿಯ ಕುಲುಮೆಯಂತಿದ್ದ ಈಜಿಪ್ಟಿನಿಂದ ನಿಮ್ಮನ್ನು ಎಳೆದು ತಂದು ತನ್ನ ವಿಶೇಷ ಜನಾಂಗವಾಗಿ ನಿಮ್ಮನ್ನು ತೆಗೆದುಕೊಂಡಿರುತ್ತಾನೆ. ಈಗ ನೀವು ಆತನ ಜನರಾಗಿದ್ದೀರಿ.


ಆಮೇಲೆ ನಾನು ನಲವತ್ತು ದಿನ ಹಗಲಿರುಳು ಯೆಹೋವನ ಮುಂದೆ ಬೋರಲ ಬಿದ್ದಿದ್ದೆನು. ನಾನು ಊಟ ಮಾಡಲಿಲ್ಲ, ನೀರನ್ನು ಕುಡಿಯಲಿಲ್ಲ ಯಾಕೆಂದರೆ ನೀವು ಪಾಪಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಆತನು ಕೋಪಗೊಂಡಿದ್ದನು.


‘ನನ್ನ ಒಡೆಯನೇ, ಯೆಹೋವನೇ, ನಿನ್ನ ಜನರನ್ನು ನೀನು ನಾಶಮಾಡಬೇಡ. ಅವರು ನಿನ್ನ ಜನಾಂಗ. ನಿನ್ನ ಪರಾಕ್ರಮದಿಂದ ನೀನು ಈಜಿಪ್ಟಿನಿಂದ ಅವರನ್ನು ಬಿಡಿಸಿ ಹೊರತಂದಿರುವೆ.


ಆದರೆ ಅವರು ನಿನ್ನ ಜನರಾಗಿದ್ದಾರೆ. ಅವರು ನಿನಗೆ ಸಂಬಂಧಪಟ್ಟವರಾಗಿದ್ದಾರೆ; ನಿನ್ನ ಬಲಪರಾಕ್ರಮದಿಂದ ಅವರನ್ನು ದಾಸತ್ವದಿಂದ ಬಿಡುಗಡೆ ಮಾಡಿರುವೆ.’


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಮೋಶೆಯು ಯೆಹೋವನಿಗೆ, “ಈ ಜನರನ್ನು ಮುನ್ನಡೆಸಬೇಕೆಂದು ನೀನು ನನಗೆ ಹೇಳಿರುವೆ. ಆದರೆ ನನ್ನೊಂದಿಗೆ ಯಾರನ್ನು ಕಳುಹಿಸುತ್ತೀಯೆಂದು ನೀನು ಹೇಳಲಿಲ್ಲ. ನೀನು ನನಗೆ, ‘ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಾನು ನಿನ್ನನ್ನು ಮೆಚ್ಚಿದ್ದೇನೆ’ ಎಂದು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು