ವಿಮೋಚನಕಾಂಡ 35:2 - ಪರಿಶುದ್ದ ಬೈಬಲ್2 “ಕೆಲಸ ಮಾಡುವುದಕ್ಕೆ ಆರು ದಿನಗಳಿವೆ. ಆದರೆ ಏಳನೆಯ ದಿನವು ನಿಮಗೆ ಬಹು ವಿಶೇಷವಾದ ವಿಶ್ರಾಂತಿ ದಿನವಾಗಿರುವುದು. ಆ ವಿಶೇಷ ದಿನದಲ್ಲಿ ವಿಶ್ರಮಿಸುವುದರ ಮೂಲಕ ನೀವು ಯೆಹೋವನನ್ನು ಸನ್ಮಾನಿಸುವಿರಿ. ಏಳನೆಯ ದಿನದಲ್ಲಿ ಕೆಲಸಮಾಡುವ ವ್ಯಕ್ತಿಯು ಸಂಹರಿಸಲ್ಪಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆರು ದಿನಗಳು ನೀವು ಕೆಲಸ ಮಾಡಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾಗಿರುವುದರಿಂದ ಅಂದು ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆರು ದಿನಗಳು ದುಡಿಯಬೇಕು. ಏಳನೆಯ ದಿನ ಪರಿಶುದ್ಧವಾದ ದಿನ. ಅದು ಸರ್ವೇಶ್ವರನಿಗೆ ಮೀಸಲಾದ ಸಬ್ಬತ್ ದಿನ. ಆದ್ದರಿಂದ ನೀವು ಸಂಪೂರ್ಣವಾಗಿ ದುಡಿಮೆ ನಿಲ್ಲಿಸಬೇಕು. ಆ ದಿನ ದುಡಿಯುವವನಿಗೆ ಮರಣದಂಡನೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆರು ದಿನಗಳು ಕೆಲಸನಡೆಯಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾದ್ದರಿಂದ ಅದರಲ್ಲಿ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧವಾಗಿರಬೇಕು. ಅದು ಯೆಹೋವ ದೇವರ ಸಬ್ಬತ್ ದಿನ. ಆ ದಿನದಲ್ಲಿ ಕೆಲಸಮಾಡುವವರಿಗೆ ಮರಣದಂಡನೆಯಾಗಬೇಕು. ಅಧ್ಯಾಯವನ್ನು ನೋಡಿ |