Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:21 - ಪರಿಶುದ್ದ ಬೈಬಲ್‌

21 ಕಾಣಿಕೆ ಕೊಡುವುದಕ್ಕೆ ಯಾರ್ಯಾರು ಬಯಸಿದರೋ ಅವರೆಲ್ಲರೂ ಬಂದು ಯೆಹೋವನಿಗೆ ಕಾಣಿಕೆಯನ್ನು ಅರ್ಪಿಸಿದರು. ಈ ಕಾಣಿಕೆಗಳು ದೇವದರ್ಶನಗುಡಾರ, ಅದರ ಎಲ್ಲಾ ವಸ್ತುಗಳು ಮತ್ತು ವಿಶೇಷ ಬಟ್ಟೆಗಳನ್ನು ಮಾಡಲು ಉಪಯೋಗಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾರನ್ನು ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತ್ರಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರಲ್ಲಿ ಉದಾರ ಹೃದಯಿಗಳು ಸ್ವಂತ ಇಷ್ಟದಿಂದ ಮುಂದೆ ಬಂದು ದೇವದರ್ಶನದ ಗುಡಾರದ ಕೆಲಸಕ್ಕೂ, ಅದರ ಸಮಸ್ತ ಸೇವೆಗೂ ಹಾಗೂ ದೀಕ್ಷಾವಸ್ತ್ರಗಳಿಗೂ ಬೇಕಾದುವುಗಳನ್ನು ಸರ್ವೇಶ್ವರನಿಗೆ ಕಾಣಿಕೆಯಾಗಿ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾರಾರನ್ನು ಹೃದಯವು ಪ್ರೇರಿಸಿತೋ ಯಾರಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕೋಸ್ಕರವೂ ಅದರ ಸಮಸ್ತ ಸೇವೆಗೋಸ್ಕರವೂ ದೀಕ್ಷಾವಸ್ತ್ರಗಳಿಗೋಸ್ಕರವೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೃದಯ ಪ್ರೇರಣೆ ಹೊಂದಿದವರೂ ಸಿದ್ಧಮನಸ್ಸಿನವರೂ ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಯೆಹೋವ ದೇವರಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:21
28 ತಿಳಿವುಗಳ ಹೋಲಿಕೆ  

“ಇಸ್ರೇಲರು ನನಗೆ ಕಾಣಿಕೆಗಳನ್ನು ತರಬೇಕೆಂದು ಅವರಿಗೆ ಹೇಳು. ಪ್ರತಿಯೊಬ್ಬನು ನನಗೆ ಕೊಡುವುದರ ಬಗ್ಗೆ ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಈ ಕಾಣಿಕೆಗಳನ್ನು ನನಗಾಗಿ ಸ್ವೀಕರಿಸು.


ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ.


ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಈ ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಈ ಕಾಣಿಕೆಗಳು ಉಪಯೋಗಿಸಲ್ಪಟ್ಟವು.


ನಿಪುಣರಾಗಿದ್ದ ಇತರ ಸ್ತ್ರೀಯರು ಆಡುಕೂದಲಿನಿಂದ ಬಟ್ಟೆಯನ್ನು ತಯಾರಿಸಿದರು.


ಯೆಹೋವನಿಗಾಗಿ ಕಾಣಿಕೆಗಳನ್ನು ಕೂಡಿಸಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತಾನು ಕೊಡುವಂಥದ್ದನ್ನು ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಬಳಿಕ ಆ ಕಾಣಿಕೆಯನ್ನು ಯೆಹೋವನ ಸನ್ನಿಧಿಗೆ ತರಬೇಕು. ಚಿನ್ನ, ಬೆಳ್ಳಿ, ತಾಮ್ರ,


ಬಳಿಕ ಮೋಶೆಯು ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯೆಹೋವನಿಂದ ವಿಶೇಷ ಜ್ಞಾನ ಹೊಂದಿದ ಇತರ ಎಲ್ಲಾ ನಿಪುಣರನ್ನೂ ಕರೆದನು. ಕೆಲಸದಲ್ಲಿ ಸಹಾಯಮಾಡಲು ಇವರು ಬಯಸಿದ್ದರಿಂದ ಬಂದರು.


ಕಾಣಿಕೆ ಕೊಡುವುದಕ್ಕೆ ಬಯಸಿದ ಎಲ್ಲಾ ಗಂಡಸರು, ಹೆಂಗಸರು ಎಲ್ಲಾ ವಿಧದ ಚಿನ್ನದ ಆಭರಣಗಳನ್ನು ತಂದರು. ಅವರು ತಮ್ಮ ಕಡಗ, ಮೂಗುತಿ, ಉಂಗುರ, ಕಂಠಮಾಲೆ ಮತ್ತು ಇತರ ಚಿನ್ನದ ಆಭರಣಗಳನ್ನು ತಂದರು. ಅವರೆಲ್ಲರು ತಮ್ಮ ಎಲ್ಲಾ ಕೊಡುಗೆಗಳನ್ನು ಯೆಹೋವನಿಗೆ ಕೊಟ್ಟರು. ಇದು ಯೆಹೋವನಿಗೆ ಕೊಟ್ಟ ವಿಶೇಷವಾದ ಕಾಣಿಕೆಯಾಗಿತ್ತು.


ಪ್ರತಿಯೊಬ್ಬ ವ್ಯಕ್ತಿಯು ತನ್ನ ಹೃದಯದಲ್ಲಿ ಎಷ್ಟನ್ನು ನಿರ್ಧರಿಸಿಕೊಂಡಿದ್ದಾನೋ ಅಷ್ಟನ್ನೇ ಕೊಡಬೇಕು. ಯಾವನೂ ದುಃಖದಿಂದ ಕೊಡಬಾರದು. ಅಲ್ಲದೆ ಯಾವನೂ ಒತ್ತಾಯದ ದೆಸೆಯಿಂದ ಕೊಡಬಾರದು. ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುತ್ತಾನೆ.


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


ನೀವು ಹಾವುಗಳು! ನೀವು ದುಷ್ಟರು! ಒಳ್ಳೆಯದನ್ನು ನೀವು ಹೇಗೆ ಹೇಳುವಿರಿ? ನಿಮ್ಮ ಹೃದಯದಲ್ಲಿ ತುಂಬಿರುವುದನ್ನೇ ನಿಮ್ಮ ಬಾಯಿ ಮಾತಾಡುತ್ತದೆ.


ಅವರಲ್ಲೇ ಒಬ್ಬನು ಅವರಿಗೆ ನಾಯಕನಾಗಿರುವನು. ಆ ನಾಯಕನು ನನ್ನ ಜನರಿಂದಲೇ ಬರುವನು. ನಾನು ಹೇಳಿದರೆ ಮಾತ್ರ ಜನರು ನನ್ನ ಹತ್ತಿರಕ್ಕೆ ಬರಲು ಸಾಧ್ಯ. ಆದ್ದರಿಂದ ನಾನು ಆ ನಾಯಕನನ್ನು ನನ್ನ ಹತ್ತಿರ ಬರಲು ಹೇಳುವೆನು. ಅವನು ನನಗೆ ತುಂಬಾ ಹತ್ತಿರದವನಾಗುವನು.


ನಿನ್ನ ಆಲೋಚನೆಗಳ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಿನ್ನ ನಡತೆಯು ನಿನ್ನ ಆಲೋಚನೆಗಳ ಮೇಲೆ ಆಧಾರಗೊಂಡಿದೆ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.


ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!


ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು.


ಅಲ್ಲದೆ ದೇವಾಲಯಕ್ಕೆ ಬೇಕಾದ ಬೆಳ್ಳಿಬಂಗಾರಗಳ ಸಾಮಾನುಗಳನ್ನು ನಾನು ಕಾಣಿಕೆಯಾಗಿ ಕೊಟ್ಟಿರುತ್ತೇನೆ. ಯಾಕೆಂದರೆ ನನ್ನ ದೇವರ ಪರಿಶುದ್ಧಾಲಯವು ಕಟ್ಟಲ್ಪಡಬೇಕೆಂಬುದು ನಿಜವಾಗಿಯೂ ನನ್ನ ಬಯಕೆಯಾಗಿದೆ. ಈ ಪವಿತ್ರ ದೇವಾಲಯವನ್ನು ಕಟ್ಟಲು ನಾನು ಈ ವಸ್ತುಗಳನ್ನೆಲ್ಲಾ ಕೊಡುತ್ತಿದ್ದೇನೆ.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಎಲ್ಲರೂ ಸೇರಿಬಂದಾಗ ದಾವೀದನು ನಿಂತು ಹೇಳಿದ್ದೇನೆಂದರೆ, “ನನ್ನ ಜನರೇ, ನನ್ನ ಸಹೋದರರೇ, ನನ್ನ ಮಾತುಗಳನ್ನು ಕೇಳಿರಿ. ನಮ್ಮ ದೇವರ ಒಡಂಬಡಿಕೆಯ ಪೆಟ್ಟಿಗೆಗೋಸ್ಕರ ಒಂದು ಯೋಗ್ಯಸ್ಥಳವನ್ನು ನಿರ್ಮಿಸಬೇಕೆಂದು ನನ್ನ ಮನಸ್ಸಿನಲ್ಲಿತ್ತು. ಆ ಸ್ಥಳವು ದೇವರ ಪಾದಪೀಠವಾಗಬೇಕು. ಅದಕ್ಕಾಗಿ ನಾನು ದೇವರಿಗೆ ಆಲಯವನ್ನು ಕಟ್ಟಿಸಲು ಯೋಜನೆಯನ್ನು ಹಾಕಿದೆನು.


“ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನೇ, ನೀನು ನನಗೆ ಮುಂದಿನ ಸಂಗತಿಗಳನ್ನು ತೋರಿಸಿರುವೆ. ‘ನಾನು ನಿನ್ನ ಕುಟುಂಬವನ್ನು ಸ್ಥಿರಪಡಿಸುವೆನು’ ಎಂದು ಹೇಳಿರುವೆ. ಆ ಕಾರಣದಿಂದಲೇ ನಿನ್ನ ಸೇವಕನಾದ ನಾನು ನಿನ್ನಲ್ಲಿ ಈ ಪ್ರಾರ್ಥನೆಯನ್ನು ಸಲ್ಲಿಸಲು ತೀರ್ಮಾನಿಸಿದ್ದೇನೆ.


“ಏಳು, ಏಳು ದೆಬೋರಳೇ! ಏಳು, ಎದ್ದೇಳು, ಒಂದು ಗೀತೆಯನ್ನು ಹಾಡು! ಬಾರಾಕನೇ, ಏಳು! ಅಬೀನೋವಮನ ಮಗನೇ, ಹೋಗು; ನಿನ್ನ ಶತ್ರುಗಳನ್ನು ಸೆರೆ ಹಿಡಿದುಕೊ!


“ನನ್ನ ಹೃದಯವು ಇಸ್ರೇಲಿನ ಸೇನಾಧಿಪತಿಗಳ ಸಂಗಡವಿದೆ. ಈ ಸೇನಾಧಿಪತಿಗಳು ಇಸ್ರೇಲಿಗಾಗಿ ಯುದ್ಧಮಾಡಲು ಸ್ವಇಚ್ಛೆಯಿಂದ ಬಂದರು. ಯೆಹೋವನಿಗೆ ಸ್ತೋತ್ರವಾಗಲಿ.


“ಅರಸರೇ ಕೇಳಿರಿ, ಆಳುವವರೇ ಗಮನಿಸಿರಿ! ನಾನು ಹಾಡುವೆನು. ನಾನು ಯೆಹೋವನನ್ನು ಕೀರ್ತಿಸುವೆನು. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಗಾನ ಮಾಡುವೆನು.


ಬಳಿಕ ಇಸ್ರೇಲರೆಲ್ಲರೂ ಮೋಶೆಯ ಬಳಿಯಿಂದ ಹೊರಟುಹೋದರು.


ಯಾರ ಬಳಿಯಲ್ಲಿ ಬೆಲೆಬಾಳುವ ರತ್ನಗಳಿದ್ದವೋ ಅವುಗಳನ್ನು ದೇವರ ಆಲಯಕ್ಕಾಗಿ ಸಮರ್ಪಿಸಿದರು. ಗೇರ್ಷೋನ್ ಸಂತತಿಯವನಾದ ಯೆಹೀಯೇಲನು ಅವುಗಳನ್ನು ತನ್ನ ವಶಕ್ಕೆ ತೆಗೆದುಕೊಂಡನು.


ಈ ಗುಂಪು ಜೆರುಸಲೇಮಿನಲ್ಲಿದ್ದ ದೇವಾಲಯದ ಬಳಿ ಬಂದಾಗ ಆ ದೇವಾಲಯವನ್ನು ಮತ್ತೆ ನಿರ್ಮಿಸಲು ಕುಟುಂಬದ ನಾಯಕರುಗಳು ತಮ್ಮತಮ್ಮ ಕಾಣಿಕೆಗಳನ್ನು ಕೊಟ್ಟರು. ಕೆಡವಲ್ಪಟ್ಟಿದ್ದ ದೇವಾಲಯದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ಕಟ್ಟಲು ಪ್ರಾರಂಭಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು