ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.
ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.
ತ್ರುಫೈನಳಿಗೂ ತ್ರುಫೋಸಳಿಗೂ ನನ್ನ ವಂದನೆ ತಿಳಿಸಿರಿ. ಅವರು ಪ್ರಭುವಿಗಾಗಿ ಬಹು ಕಷ್ಟಪಟ್ಟು ಸೇವೆ ಮಾಡುತ್ತಿದ್ದಾರೆ. ನನ್ನ ಪ್ರಿಯ ಸಹೋದರಿಯಾದ ಪೆರ್ಸೀಸಳಿಗೂ ನನ್ನ ವಂದನೆ ತಿಳಿಸಿರಿ. ಆಕೆಯು ಸಹ ಪ್ರಭುವಿಗೋಸ್ಕರ ಬಹು ಕಷ್ಟಪಟ್ಟು ಸೇವೆ ಮಾಡಿದಳು.
ಪೇತ್ರನು ಸಿದ್ಧನಾಗಿ ಅವರೊಂದಿಗೆ ಹೋದನು. ಅವನು ಅಲ್ಲಿಗೆ ತಲುಪಿದಾಗ, ಅವರು ಅವನನ್ನು ಮೇಲ್ಮಾಳಿಗೆಯ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರೆಲ್ಲ ಅಳುತ್ತಾ ಪೇತ್ರನನ್ನು ಸುತ್ತುವರಿದರು. ದೊರ್ಕಳು ಜೀವಂತವಾಗಿದ್ದಾಗ ತಮಗಾಗಿ ತಯಾರಿಸಿ ಕೊಟ್ಟ ಮೇಲಂಗಿಗಳನ್ನು ಮತ್ತು ಬಟ್ಟೆಗಳನ್ನು ಅವರು ಪೇತ್ರನಿಗೆ ತೋರಿಸಿದರು.
“ಆದ್ದರಿಂದ ಬೆಚಲೇಲನೂ ಒಹೊಲೀಯಾಬನೂ ಮತ್ತು ಇತರ ಎಲ್ಲಾ ನಿಪುಣರೂ ಯೆಹೋವನು ಆಜ್ಞಾಪಿಸಿದ ಕೆಲಸವನ್ನು ಮಾಡಬೇಕು. ಈ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಅವಶ್ಯವಿರುವ ಎಲ್ಲಾ ಸೂಕ್ಷ್ಮವಾದ ಕೆಲಸವನ್ನು ಮಾಡುವುದಕ್ಕೆ ಯೆಹೋವನು ಈ ಜನರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಅನುಗ್ರಹಿಸಿದ್ದಾನೆ.”
ಅವನೊಂದಿಗೆ ಕೆಲಸ ಮಾಡಲು ನಾನು ಒಹೊಲೀಯಾಬನನ್ನು ಆರಿಸಿಕೊಂಡಿದ್ದೇನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಬೇರೆ ಕೆಲಸಗಾರರಿಗೆಲ್ಲಾ ನಿಪುಣತೆಯನ್ನು ಅನುಗ್ರಹಿಸಿದ್ದೇನೆ:
ಈ ಬಟ್ಟೆಗಳನ್ನು ಮಾಡುವಂಥ ಕೆಲವು ನಿಪುಣರಿದ್ದಾರೆ. ನಾನು ಅವರಿಗೆ ವಿಶೇಷ ಜ್ಞಾನವನ್ನು ಕೊಟ್ಟಿದ್ದೇನೆ. ಆರೋನನಿಗೆ ಬೇಕಾದ ಬಟ್ಟೆಗಳನ್ನು ಮಾಡಲು ಅವರಿಗೆ ಹೇಳು. ಅವನು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾನೆಂದು ಈ ಬಟ್ಟೆಗಳು ತೋರಿಸುತ್ತವೆ. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.
ನೇಮಿಸಲ್ಪಟ್ಟ ಯಾಜಕರ ಮತ್ತು ಲೇವಿಯರ ತಂಡಗಳು ದೇವಾಲಯದ ಸೇವೆಗಾಗಿ ಸಿದ್ಧರಾಗಿದ್ದಾರೆ; ಅನುಭವಸ್ಥರಾದ ಕಾರ್ಮಿಕರು ದೇವಾಲಯದ ಕೆಲಸಕ್ಕಾಗಿ ಸಿದ್ಧರಾಗಿದ್ದಾರೆ. ಕೆಲಸದ ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ನಿನ್ನ ಆಜ್ಞೆಯನ್ನು ಪರಿಪಾಲಿಸಲು ಸಿದ್ಧರಾಗಿದ್ದಾರೆ” ಎಂದು ದಾವೀದನು ಸೊಲೊಮೋನನಿಗೆ ಹೇಳಿದನು.