ವಿಮೋಚನಕಾಂಡ 35:29 - ಪರಿಶುದ್ದ ಬೈಬಲ್29 ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಈ ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಈ ಕಾಣಿಕೆಗಳು ಉಪಯೋಗಿಸಲ್ಪಟ್ಟವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಗಳಿಗೋಸ್ಕರ ಆತನಿಗೆ ಕಾಣಿಕೆಗಳನ್ನು ತಂದುಕೊಟ್ಟ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಹೀಗೆ ಮಾಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ಬೇಕಾದವುಗಳನ್ನು ಇಸ್ರಾಯೇಲಿನ ಸ್ತ್ರೀಪುರುಷರೆಲ್ಲರು ಮನಃಪೂರ್ವಕವಾಗಿಯೇ ಯೆಹೋವ ದೇವರಿಗೆ ಕಾಣಿಕೆಯನ್ನು ತಂದರು. ಅಧ್ಯಾಯವನ್ನು ನೋಡಿ |