Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:35 - ಪರಿಶುದ್ದ ಬೈಬಲ್‌

35 ಯೆಹೋವನು ಇವರಿಬ್ಬರಿಗೆ ಎಲ್ಲಾ ವಿಧದ ಕೆಲಸಗಳನ್ನು ಮಾಡಲು ವಿಶೇಷ ನಿಪುಣತೆಯನ್ನು ಅನುಗ್ರಹಿಸಿದ್ದಾನೆ. ಅವರು ಮರಗೆಲಸವನ್ನೂ ಲೋಹದ ಕೆಲಸವನ್ನೂ ಮಾಡಬಲ್ಲರು. ಅವರು ನೀಲಿ, ನೇರಳೆ ಕೆಂಪುದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಅಲಂಕೃತವಾದ ಬಟ್ಟೆಗಳನ್ನು ನೇಯಿಗೆ ಮಾಡಬಲ್ಲರು; ಅವರು ಉಣ್ಣೆ ಬಟ್ಟೆಗಳನ್ನು ನೇಯಲು ಶಕ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಶಿಲ್ಪಿಗಳು, ಚಮತ್ಕಾರವಾದ ಕೆಲಸ ನಿಯೋಜಿಸುವವರು ಹಾಗು ನೀಲಿ, ಊದ ಹಾಗು ಕಡುಗೆಂಪು ವರ್ಣದ ದಾರದಿಂದಲೂ ನಯವಾದ ನಾರುಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲ ಕಸುಬುದಾರರು ನಡೆಸುವ ಕೆಲಸಗಳನ್ನು ನಿಯೋಜಿಸುವುದಕ್ಕೂ ಹಾಗು ಕಾರ್ಯಗತ ಮಾಡುವುದಕ್ಕೂ ಸರ್ವೇಶ್ವರ ಅವರಿಗೆ ಜ್ಞಾನವನ್ನು ಪೂರ್ತಿಯಾಗಿ ಅನುಗ್ರಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಶಿಲ್ಪಿಗಳು, ಚಮತ್ಕಾರವಾದ ಕೆಲಸ ಕಲ್ಪಿಸುವವರು, ನೀಲಿ ಧೂಮ್ರರಕ್ತವರ್ಣದ ದಾರದಿಂದಲೂ ನಾರುಬಟ್ಟೆಯಿಂದಲೂ ಬುಟೇದಾರೀ ಕೆಲಸಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ನಡಿಸುವ ಕೆಲಸಗಳನ್ನು ಕಲ್ಪಿಸುವದಕ್ಕೂ ಮಾಡುವದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಕೆತ್ತನೆಯ ಕೆಲಸಗಳನ್ನು, ವಿನ್ಯಾಸದ ಕೆಲಸಗಳನ್ನು, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ, ನಯವಾದ ನಾರುಬಟ್ಟೆ ಇವುಗಳಲ್ಲಿ ಕಸೂತಿ ಕೆಲಸಗಳನ್ನು ಮಾಡುವುದಕ್ಕೆ ಮತ್ತು ನೇಯ್ಗೆಯ ಕೆಲಸ ಮಾಡುವುದಕ್ಕೆ ಎಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಯೆಹೋವ ದೇವರು ಅವರಿಗೆ ಜ್ಞಾನವನ್ನು ಅನುಗ್ರಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:35
23 ತಿಳಿವುಗಳ ಹೋಲಿಕೆ  

ಯೆಹೋವನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿ, ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದಾನೆ.


ಹೀರಾಮನ ತಾಯಿಯು ನಫ್ತಾಲಿ ಕುಲದವಳಾಗಿದ್ದಳು ಮತ್ತು ಇಸ್ರೇಲಿನವಳಾಗಿದ್ದಳು. ಅವನ ದಿವಂಗತ ತಂದೆಯು ತೂರಿನವನಾಗಿದ್ದನು. ಹೀರಾಮನು ಹಿತ್ತಾಳೆಯಿಂದ ವಸ್ತುಗಳನ್ನು ತಯಾರಿಸುತ್ತಿದ್ದನು. ಅವನು ಕುಶಲಕರ್ಮಿಯೂ ಅನುಭವಿಯೂ ಆದ ಕೆಲಸಗಾರನಾಗಿದ್ದನು. ರಾಜನಾದ ಸೊಲೊಮೋನನು ಹೀರಾಮನಿಗೆ ಬರಲು ಹೇಳಿದಾಗ, ಅವನು ಒಪ್ಪಿಕೊಂಡನು. ರಾಜನಾದ ಸೊಲೊಮೋನನು ಎಲ್ಲಾ ಹಿತ್ತಾಳೆಯ ಕಾರ್ಯಗಳಿಗೆ ಹೀರಾಮನನ್ನು ಮೇಲ್ವಿಚಾರಕನನ್ನಾಗಿ ನೇಮಿಸಿದನು. ಹೀರಾಮನು ಹಿತ್ತಾಳೆಯ ವಸ್ತುಗಳನ್ನು ನಿರ್ಮಿಸಿದನು.


ನಮ್ಮ ದೇವರು ಈ ಉದಾಹರಣೆಯ ಮೂಲಕ ಒಂದು ಪಾಠವನ್ನು ಕಲಿಸುತ್ತಾನೆ. ಏನೆಂದರೆ ಆತನು ಜನರನ್ನು ಶಿಕ್ಷಿಸುವಾಗ ನ್ಯಾಯವಾಗಿ ಶಿಕ್ಷಿಸುತ್ತಾನೆ.


ನಾನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿದ್ದೇನೆ. ನಾನು ಅವನಿಗೆ ಎಲ್ಲಾ ಬಗೆಯ ಕೆಲಸಗಳನ್ನು ಮಾಡಲು ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದೇನೆ.


ದೇವರ ದೃಷ್ಟಿಯಲ್ಲಿ ಯೋಗ್ಯ ವ್ಯಕ್ತಿಯಾಗಲು ನಿನ್ನಿಂದಾದಷ್ಟು ಪ್ರಯಾಸಪಡು ಮತ್ತು ನಿನ್ನನ್ನೇ ಒಪ್ಪಿಸಿಕೊಡು. ತನ್ನ ಕೆಲಸದಲ್ಲಿ ನಾಚಿಕೆಪಡದಿರುವ ಕೆಲಸಗಾರನಾಗು, ಅಂದರೆ ಸತ್ಯೋಪದೇಶವನ್ನು ಯೋಗ್ಯವಾದ ರೀತಿಯಲ್ಲಿ ತಿಳಿಸುವವನಾಗು.


ಅವನೊಂದಿಗೆ ಕೆಲಸ ಮಾಡಲು ನಾನು ಒಹೊಲೀಯಾಬನನ್ನು ಆರಿಸಿಕೊಂಡಿದ್ದೇನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಬೇರೆ ಕೆಲಸಗಾರರಿಗೆಲ್ಲಾ ನಿಪುಣತೆಯನ್ನು ಅನುಗ್ರಹಿಸಿದ್ದೇನೆ:


ನಿನ್ನ ಜೀವನದಲ್ಲಿಯೂ ನಿನ್ನ ಬೋಧನೆಯಲ್ಲಿಯೂ ಎಚ್ಚರಿಕೆಯಿಂದಿರು. ಯೋಗ್ಯವಾದ ರೀತಿಯಲ್ಲಿ ಜೀವಿಸುತ್ತಾ ಬೋಧಿಸು. ಆಗ ನೀನು, ನಿನ್ನನ್ನೂ ನಿನ್ನ ಬೋಧನೆ ಕೇಳುವವರನ್ನೂ ರಕ್ಷಿಸುವೆ.


ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.


ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ.


ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ.


ದೇಹವು ಒಂದೇ, ಆದರೆ ಅದು ಅನೇಕ ಅಂಗಗಳನ್ನು ಪಡೆದಿದೆ. ಹೌದು, ದೇಹದಲ್ಲಿ ಅನೇಕ ಅಂಗಗಳಿವೆ, ಆದರೆ ಆ ಎಲ್ಲಾ ಅಂಗಗಳಿಂದ ಒಂದೇ ಒಂದು ದೇಹವು ರೂಪಿತವಾಗುತ್ತದೆ. ಅಂತೆಯೇ ಕ್ರಿಸ್ತನು.


ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ.


ಅನೇಕ ರೀತಿಯ ಆತ್ಮಿಕ ವರಗಳಿವೆ. ಆದರೆ ಅವುಗಳೆಲ್ಲ ಒಬ್ಬನೇ ಆತ್ಮನಿಂದ ಬಂದಂಥವುಗಳಾಗಿವೆ.


ಹೀಗಿರಲು, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಪುನರಾಗಮನವನ್ನು ಎದುರುನೋಡುತ್ತಿರುವ ನೀವು ದೇವರಿಂದ ಬರುವ ಪ್ರತಿಯೊಂದು ವರವನ್ನು ಹೊಂದಿದವರಾಗಿದ್ದೀರಿ.


ಯೇಸುವಿನಲ್ಲಿ ಸಕಲ ಆಶೀರ್ವಾದಗಳನ್ನು ಹೊಂದಿರುವ ನೀವು ವಾಕ್ಚತುರರೂ ಜ್ಞಾನಸಂಪನ್ನರೂ ಆಗಿದ್ದೀರಿ.


ಅನಂತರ ಮೂರು ತಿಂಗಳ ಕಾಲ ಪೌಲನು ಸಭಾಮಂದಿರಕ್ಕೆ ಹೋಗಿ ಬಹು ಧೈರ್ಯದಿಂದ ಮಾತಾಡಿದನು. ಅವನು ಯೆಹೂದ್ಯರಿಗೆ ದೇವರ ರಾಜ್ಯದ ಸಂಗತಿಗಳನ್ನು ತಿಳಿಸಿ ಅವರನ್ನು ಒಡಂಬಡಿಸಲು ಪ್ರಯತ್ನಿಸಿದನು.


ಬಳಿಕ ಪೌಲನು ಅವರ ಮೇಲೆ ತನ್ನ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮಭರಿತರಾದರು. ಅವರು ವಿವಿಧ ಭಾಷೆಗಳಲ್ಲಿ ಮಾತಾಡಿದರು ಮತ್ತು ಪ್ರವಾದನೆ ಮಾಡಿದರು.


“ನನ್ನ ದಿನಗಳು ಮಗ್ಗದ ಲಾಳಿಗಿಂತಲೂ ವೇಗವಾಗಿ ಹೋಗುತ್ತವೆ. ನನ್ನ ಜೀವಿತವು ನಿರೀಕ್ಷೆಯಿಲ್ಲದೆ ಕೊನೆಗೊಳ್ಳುವುದು.


ಅವನ ತಾಯಿಯು ದಾನ್ ಕುಟುಂಬದವಳು, ತಂದೆಯು ತೂರ್ ಪಟ್ಟಣದವನು. ಅವನು ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ ಇವುಗಳ ಕೆಲಸಗಳಲ್ಲಿ ತುಂಬ ಚತುರನು. ಅಲ್ಲದೆ ನೀಲಿ, ಕೆಂಪು ಧೂಮ್ರವರ್ಣದ ಬಟ್ಟೆಗಳನ್ನು ಮತ್ತು ಬೆಲೆಬಾಳುವ ಲಿನಿನ್ ಬಟ್ಟೆಗಳನ್ನು ನೇಯುವುದರಲ್ಲಿ ನಿಪುಣನಾಗಿದ್ದಾನೆ. ನೀನು ಏನೇ ಹೇಳಿದರೂ ಅವನು ಮಾಡಿಕೊಡುವನು. ನಿನ್ನ ಮತ್ತು ದಾವೀದನ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಕೆಲಸ ಮಾಡುವನು.


ನಿನ್ನ ಕೋರಿಕೆಯನ್ನು ಅನುಗ್ರಹಿಸುವೆನು; ನಿನ್ನನ್ನು ಜ್ಞಾನಿಯನ್ನಾಗಿಯೂ ವಿವೇಕಿಯನ್ನಾಗಿಯೂ ಮಾಡುವೆನು. ಪೂರ್ವಕಾಲದಲ್ಲಿ ನಿನ್ನಂತವರು ಯಾರೊಬ್ಬರೂ ಇರಲಿಲ್ಲ ಎನ್ನುವಷ್ಟು ಜ್ಞಾನಿಯನ್ನಾಗಿ ನಿನ್ನನ್ನು ಮಾಡುತ್ತೇನೆ. ಮುಂದೆ ನಿನ್ನಂತವರು ಯಾರೊಬ್ಬರೂ ಇರುವುದಿಲ್ಲ.


ಯೆಹೋವನು ಮೋಶೆಗೆ, “ಪವಿತ್ರಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು.


ನನ್ನ ಮನೆಯು ಅಂದರೆ ನನ್ನ ಕುರುಬನ ಗುಡಾರವು ಕೀಳಲ್ಪಟ್ಟು ನನ್ನಿಂದ ತೆಗೆಯಲ್ಪಡುತ್ತಿದೆ. ಒಬ್ಬನು ಮಗ್ಗದಲ್ಲಿ ಬಟ್ಟೆಯನ್ನು ಸುತ್ತಿ ಕತ್ತರಿಸಿಬಿಡುವಂತೆ ನಾನು ಕತ್ತರಿಸಲ್ಪಟ್ಟಿದ್ದೇನೆ. ನನ್ನ ಆಯುಷ್ಯವನ್ನು ಚಿಕ್ಕ ವಯಸ್ಸಿನಲ್ಲಿಯೇ ಮುಗಿಸಿಬಿಟ್ಟಿರುವೆ.


“ಆದ್ದರಿಂದ ಬೆಚಲೇಲನೂ ಒಹೊಲೀಯಾಬನೂ ಮತ್ತು ಇತರ ಎಲ್ಲಾ ನಿಪುಣರೂ ಯೆಹೋವನು ಆಜ್ಞಾಪಿಸಿದ ಕೆಲಸವನ್ನು ಮಾಡಬೇಕು. ಈ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಅವಶ್ಯವಿರುವ ಎಲ್ಲಾ ಸೂಕ್ಷ್ಮವಾದ ಕೆಲಸವನ್ನು ಮಾಡುವುದಕ್ಕೆ ಯೆಹೋವನು ಈ ಜನರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಅನುಗ್ರಹಿಸಿದ್ದಾನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು