ವಿಮೋಚನಕಾಂಡ 36:2 - ಪರಿಶುದ್ದ ಬೈಬಲ್2 ಬಳಿಕ ಮೋಶೆಯು ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯೆಹೋವನಿಂದ ವಿಶೇಷ ಜ್ಞಾನ ಹೊಂದಿದ ಇತರ ಎಲ್ಲಾ ನಿಪುಣರನ್ನೂ ಕರೆದನು. ಕೆಲಸದಲ್ಲಿ ಸಹಾಯಮಾಡಲು ಇವರು ಬಯಸಿದ್ದರಿಂದ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಬೆಚಲೇಲನನ್ನು ಒಹೋಲೀಯಾಬನನ್ನು ಮತ್ತು ಸರ್ವೇಶ್ವರನಿಂದ ಜ್ಞಾನಪಡೆದು ಕೆಲಸ ಕೈಗೊಳ್ಳಲು ಉತ್ಸುಕರಾಗಿದ್ದ ಕಲೆಗಾರರೆಲ್ಲರನ್ನು ಮೋಶೆ ತನ್ನ ಬಳಿಗೆ ಕರೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯಾರಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಇಟ್ಟಿದ್ದನೋ ಯಾರಾರನ್ನು ಈ ಕೆಲಸಮಾಡುವದಕ್ಕೆ ಹೃದಯ ಪ್ರೇರಿಸಿತೋ ಆ ಜಾಣರೆಲ್ಲರನ್ನೂ ಮೋಶೆ ತನ್ನ ಹತ್ತಿರಕ್ಕೆ ಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಬೆಚಲಯೇಲನನ್ನು, ಒಹೋಲಿಯಾಬನನ್ನು ಮತ್ತು ಯೆಹೋವ ದೇವರು ಜ್ಞಾನಕೊಟ್ಟಿದ್ದ ಪ್ರತಿಯೊಬ್ಬ ಶಿಲ್ಪಿಯನ್ನೂ ಆ ಕೆಲಸ ಮಾಡುವುದಕ್ಕೆ ಸಿದ್ಧ ಮನಸ್ಸಿದ್ದ ಪ್ರತಿಯೊಬ್ಬನನ್ನೂ ಮೋಶೆಯು ಕರೆದನು. ಅಧ್ಯಾಯವನ್ನು ನೋಡಿ |