Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:7 - ಪರಿಶುದ್ದ ಬೈಬಲ್‌

7 ದೇವರ ಪವಿತ್ರಸ್ಥಳವನ್ನು ಕಟ್ಟುವ ಕೆಲಸವನ್ನು ಮುಗಿಸುವುದಕ್ಕೆ ಬೇಕಾಗಿರುವುದಕ್ಕಿಂತಲೂ ಹೆಚ್ಚಾಗಿ ಜನರು ತಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿರ್ಮಾಣ ಕೆಲಸ ಮುಗಿಸುವುದಕ್ಕೆ ಬೇಕಾಗುವುದಕ್ಕಿಂತಲೂ ಹೆಚ್ಚಾಗಿ ಸರಕುಸಾಮಗ್ರಿಗಳನ್ನು ಶೇಖರಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೆಲಸವನ್ನೆಲ್ಲಾ ಮಾಡುವದಕ್ಕೆ ಸಾಕಾಗುವದಕ್ಕಿಂತಲೂ ಹೆಚ್ಚಾದ ಸಾಮಗ್ರಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಎಲ್ಲಾ ಕೆಲಸವನ್ನು ಮಾಡುವುದಕ್ಕೆ ಸಾಕಾಗಿ ಮಿಕ್ಕುವಷ್ಟು ಸಾಮಗ್ರಿಗಳು ದೊರೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:7
3 ತಿಳಿವುಗಳ ಹೋಲಿಕೆ  

ಚಾದೋಕನ ಕುಲದ ಮಹಾಯಾಜಕನಾದ ಅಜರ್ಯನು ಹಿಜ್ಕೀಯನಿಗೆ, “ದೇವಾಲಯಕ್ಕೆ ಜನರು ಕಾಣಿಕೆಗಳನ್ನು ತರಲು ಪ್ರಾರಂಭ ಮಾಡಿದಂದಿನಿಂದ ನಮಗೆ ಊಟಕ್ಕೆ ಯಾವ ಕೊರತೆಯೂ ಇಲ್ಲವಾಗಿದೆ. ನಾವು ತೃಪ್ತಿಯಾಗುವಷ್ಟು ಊಟಮಾಡಿದರೂ ಇನ್ನೂ ಉಳಿದಿರುತ್ತದೆ. ದೇವರು ನಿಜವಾಗಲೂ ತನ್ನ ಜನರನ್ನು ಆಶೀರ್ವದಿಸಿರುತ್ತಾನೆ. ಆದ್ದರಿಂದಲೇ ನಮಗೆ ಹೇರಳವಾಗಿ ಉಳಿದಿದೆ” ಎಂದು ಹೇಳಿದನು.


ಆಗ ಮೋಶೆಯು, “ಪವಿತ್ರಸ್ಥಳದ ಕೆಲಸಕ್ಕಾಗಿ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಇನ್ನು ಮುಂದೆ ಯಾವುದನ್ನೂ ಕಾಣಿಕೆಯಾಗಿ ಸಿದ್ಧಮಾಡಬಾರದು” ಎಂಬ ಸಂದೇಶವನ್ನು ಪಾಳೆಯದಲ್ಲೆಲ್ಲಾ ಕಳುಹಿಸಿದನು. ಆದ್ದರಿಂದ ಜನರು ಹೆಚ್ಚಾಗಿ ಕೊಡುವುದನ್ನು ನಿಲ್ಲಿಸಬೇಕಾಯಿತು.


ಅಂದು ರಾಜನಾದ ಸೊಲೊಮೋನನು ಆಲಯದ ಮುಂದಿನ ಅಂಗಳವನ್ನು ಪ್ರತಿಷ್ಠಿಸಿದನು. ಅವನು ಸರ್ವಾಂಗಹೋಮಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸಿದ್ದ ಪಶುಗಳ ಕೊಬ್ಬನ್ನು ಅಂಗಳದಲ್ಲಿ ಅರ್ಪಿಸಿದನು. ಯಾಕೆಂದರೆ ಯೆಹೋವನ ಮುಂದೆ ಇದ್ದ ಹಿತ್ತಾಳೆಯ ಯಜ್ಞವೇದಿಕೆಯು ಈ ಎಲ್ಲವನ್ನು ಹಿಡಿಸಲಾರದಷ್ಟು ಚಿಕ್ಕದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು