Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:1 - ಪರಿಶುದ್ದ ಬೈಬಲ್‌

1 ಬೆಚಲೇಲನು ಜಾಲೀಮರದಿಂದ ಪವಿತ್ರ ಪೆಟ್ಟಿಗೆಯನ್ನು ಮಾಡಿದನು. ಪೆಟ್ಟಿಗೆಯು ಎರಡೂವರೆ ಮೊಳ ಉದ್ದ ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿದನು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ ಹಾಗೂ ಒಂದುವರೆ ಮೊಳ ಎತ್ತರವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೆಚಲಯೇಲನು ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಎತ್ತರವಾಗಿರುವ ಮಂಜೂಷವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:1
10 ತಿಳಿವುಗಳ ಹೋಲಿಕೆ  

ಚಿನ್ನದ ಬಳೆಗಳ ಕೆಳಗೆ ಪರದೆಯನ್ನು ಹಾಕಿಸಬೇಕು; ಪರದೆಯ ಹಿಂಭಾಗದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಬೇಕು. ಈ ಪರದೆಯು ಪವಿತ್ರ ಸ್ಥಳವನ್ನು ಮಹಾಪವಿತ್ರ ಸ್ಥಳದಿಂದ ಪ್ರತ್ಯೇಕಿಸುವುದು.


ಪವಿತ್ರಗುಡಾರದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡು. ಪೆಟ್ಟಿಗೆಯನ್ನು ಪರದೆಯಿಂದ ಮುಚ್ಚಿಸು.


ದೇವದರ್ಶನಗುಡಾರ, ಒಡಂಬಡಿಕೆ ಪೆಟ್ಟಿಗೆ, ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,


ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.


ಪೆಟ್ಟಿಗೆಯ ಹೊರಗಿನ ಮತ್ತು ಒಳಗಿನ ಭಾಗವನ್ನು ಅಪ್ಪಟ ಬಂಗಾರದಿಂದ ಹೊದಿಸಿದನು. ಬಳಿಕ ಪೆಟ್ಟಿಗೆಯ ಸುತ್ತಲೂ ಚಿನ್ನದ ಗೋಟು ಕಟ್ಟಿಸಿದನು.


“ನಾನು ಜಾಲೀಮರದಿಂದ ಪೆಟ್ಟಿಗೆಯನ್ನು ಮಾಡಿದೆನು. ಎರಡು ಕಲ್ಲಿನ ಹಲಗೆಗಳನ್ನು ತಯಾರಿಸಿ ಬೆಟ್ಟವನ್ನೇರಿದೆನು.


ಹೂರನು ಊರಿಯನ ತಂದೆ. ಊರಿಯು ಬೆಚಲೇಲನ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು