ವಿಮೋಚನಕಾಂಡ 37:10 - ಪರಿಶುದ್ದ ಬೈಬಲ್10 ತರುವಾಯ, ಅವನು ಜಾಲೀಮರದಿಂದ ಮೇಜನ್ನು ಮಾಡಿದನು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬೆಚಲೇಲನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬೆಚಲೇಲನು ಜಾಲೀಮರದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದೂವರೆ ಮೊಳ ಎತ್ತರವೂ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಿದನು. ಅಧ್ಯಾಯವನ್ನು ನೋಡಿ |
ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ); ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಟೆಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದುಕೊಂಡು ಹೋಗಲು ಶುದ್ಧಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶದ್ವಾರದ ಬಾಗಿಲುಗಳು.