Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:16 - ಪರಿಶುದ್ದ ಬೈಬಲ್‌

16 ಬಳಿಕ ಅವನು ಮೇಜಿನಲ್ಲಿ ಉಪಯೋಗಿಸಲ್ಪಡುತ್ತಿದ್ದ ಎಲ್ಲಾ ವಸ್ತುಗಳನ್ನು ಮಾಡಿದನು. ಅವನು ಅಪ್ಪಟ ಬಂಗಾರದ ತಟ್ಟೆ, ಚಮಚ, ಬೋಗುಣಿ ಮತ್ತು ಹೂಜೆಗಳನ್ನು ಮಾಡಿದನು. ಬೋಗುಣಿ ಮತ್ತು ಹೂಜೆಗಳು ಪಾನದ್ರವ್ಯ ಸಮರ್ಪಣೆಗಳನ್ನು ಅರ್ಪಿಸುವುದಕ್ಕೆ ಉಪಯುಕ್ತವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು, ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕಬಂಗಾರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜೆಗಳು, ಪಾನದ್ರವ್ಯವನ್ನು ಅರ್ಪಿಸುವದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣ, ಧೂಪಾರತಿಗಳು, ಹೂಜೆಗಳು, ಪಾನದ್ರವ್ಯಗಳ ಅರ್ಪಣೆಗಾಗಿ ಬೇಕಾಗುವ ಬಟ್ಟಲುಗಳನ್ನು ಶುದ್ಧ ಬಂಗಾರದಿಂದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:16
8 ತಿಳಿವುಗಳ ಹೋಲಿಕೆ  

ದೊಡ್ಡ ಮನೆಯಲ್ಲಿ ಚಿನ್ನಬೆಳ್ಳಿಗಳಿಂದ ಮಾಡಿದ ವಸ್ತುಗಳಿರುತ್ತವೆ. ಅಲ್ಲದೆ ಮರದಿಂದ, ಮಣ್ಣಿನಿಂದ ಮಾಡಿದ ವಸ್ತುಗಳೂ ಇರುತ್ತವೆ. ಕೆಲವನ್ನು ವಿಶೇಷ ಕಾರ್ಯಕ್ಕಾಗಿ ಬಳಸುತ್ತಾರೆ. ಇತರ ವಸ್ತುಗಳನ್ನು ಹೀನವಾದ ಕೃತ್ಯಗಳಿಗೆ ಬಳಸುತ್ತಾರೆ.


ಜನರು ದೇವಾಲಯಕ್ಕೆ ಹಣವನ್ನು ಕೊಟ್ಟರು. ಆದರೆ ಯಾಜಕರು ಆ ಹಣವನ್ನು ಬೆಳ್ಳಿಯ ಬಟ್ಟಲು, ಕತ್ತರಿ, ಬೋಗುಣಿ, ತುತ್ತೂರಿ ಅಥವಾ ಬೆಳ್ಳಿಬಂಗಾರಗಳ ಪಾತ್ರೆಗಳಿಗೆ ಉಪಯೋಗಿಸದೆ ಕೆಲಸಗಾರರ ವೇತನಕ್ಕೆ ಉಪಯೋಗಿಸಿದರು. ಆ ಕೆಲಸಗಾರರು ದೇವಾಲಯವನ್ನು ಸರಿಪಡಿಸಿದರು.


ತಟ್ಟೆಗಳನ್ನು, ಚಮಚಗಳನ್ನು, ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಶುದ್ಧಬಂಗಾರದಿಂದ ಮಾಡಬೇಕು. ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಪಾನದ್ರವ್ಯಗಳನ್ನು ಅರ್ಪಿಸಲು ಉಪಯೋಗಿಸಬೇಕು.


ಬಳಿಕ ಮೇಜನ್ನು ಹೊರುವುದಕ್ಕಾಗಿ ಉಪಯೋಗಿಸಲ್ಪಡುತ್ತಿದ್ದ ಕೋಲುಗಳನ್ನು ಜಾಲೀಮರದಿಂದ ಮಾಡಿದನು. ಕೋಲುಗಳನ್ನು ಅಪ್ಪಟ ಬಂಗಾರದಿಂದ ಹೊದಿಸಿದನು.


ಬಳಿಕ ಅವನು ದೀಪಸ್ತಂಭವನ್ನು ಮಾಡಿದನು. ಅವನು ಅಪ್ಪಟ ಬಂಗಾರದಿಂದ ಕಂಬವನ್ನು ಮಾಡಿದನು. ತರುವಾಯ ಹೂವು, ಮೊಗ್ಗು ಮತ್ತು ದಳಗಳನ್ನು ಮಾಡಿ ಜೋಡಿಸಿದನು. ಹೀಗೆ ಅವು ಪುಷ್ಪಾಲಂಕಾರವಾದ ಒಂದೇ ವಸ್ತುವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು