ವಿಮೋಚನಕಾಂಡ 37:17 - ಪರಿಶುದ್ದ ಬೈಬಲ್17 ಬಳಿಕ ಅವನು ದೀಪಸ್ತಂಭವನ್ನು ಮಾಡಿದನು. ಅವನು ಅಪ್ಪಟ ಬಂಗಾರದಿಂದ ಕಂಬವನ್ನು ಮಾಡಿದನು. ತರುವಾಯ ಹೂವು, ಮೊಗ್ಗು ಮತ್ತು ದಳಗಳನ್ನು ಮಾಡಿ ಜೋಡಿಸಿದನು. ಹೀಗೆ ಅವು ಪುಷ್ಪಾಲಂಕಾರವಾದ ಒಂದೇ ವಸ್ತುವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮತ್ತು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನು ಮತ್ತು ಕಂಬವನ್ನು ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವನ್ನು ಅಖಂಡವಾಗಿ ಪುಷ್ಪದಗೊಂಚಲುಗಳು, ಪುಷ್ಪಗಳು, ಮೊಗ್ಗುಗಳು ಅಲಂಕಾರವಾಗಿ ಅದರಿಂದಲೇ ಹೊರಟಂತೆ ಕೆತ್ತಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಚೊಕ್ಕಬಂಗಾರದ ದೀಪವೃಕ್ಷವನ್ನು ಮಾಡಿದನು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದನು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಮೊಗ್ಗುಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮತ್ತು ಚೊಕ್ಕಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನೂ ಕಂಬವನ್ನೂ ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಪುಷ್ಪಪಾತ್ರೆಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಚೊಕ್ಕ ಬಂಗಾರದಿಂದ ದೀಪಸ್ತಂಭವನ್ನು ಮಾಡಿದರು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದರು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇದ್ದವು. ಅಧ್ಯಾಯವನ್ನು ನೋಡಿ |
ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.