ವಿಮೋಚನಕಾಂಡ 37:29 - ಪರಿಶುದ್ದ ಬೈಬಲ್29 ತರುವಾಯ ಅವನು ಪವಿತ್ರವಾದ ಅಭಿಷೇಕತೈಲವನ್ನು ಮಾಡಿದನು. ಅವನು ಶುದ್ಧವಾದ ಪರಿಮಳಧೂಪವನ್ನು ಮಾಡಿದನು. ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಈ ವಸ್ತುಗಳನ್ನು ಮಾಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಅಭಿಷೇಕ ತೈಲವನ್ನು ಹಾಗು ಪರಿಮಳದ್ರವ್ಯಗಳಿಂದ ಮಾಡಲಾದ ಅಪ್ಪಟವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿಧಾನದ ಮೇರೆಗೆ ತಯಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳ ದ್ರವ್ಯಗಳಿಂದುಂಟಾದ ಸ್ವಚ್ಫವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅನಂತರ ಅವರು ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮತ್ತು ಪರಿಮಳ ದ್ರವ್ಯದಿಂದ ಶುದ್ಧವಾದ ಧೂಪವನ್ನು ತಯಾರಿಸಿದರು. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”