ವಿಮೋಚನಕಾಂಡ 38:21 - ಪರಿಶುದ್ದ ಬೈಬಲ್21 ಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಈ ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೇವದರ್ಶನದ ಗುಡಾರವನ್ನು ನಿರ್ಮಿಸಿದಾಗ ಉಪಯೋಗಿಸಿದ ಲೋಹಗಳ ಲೆಕ್ಕ ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಮಾಡಿಸಿದ ಪಟ್ಟಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದೇವದರ್ಶನದ ಗುಡಾರವನ್ನು ಮಾಡುವದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕ. ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೇವದರ್ಶನದ ಗುಡಾರಕ್ಕೆ ಅಂದರೆ ಒಡಂಬಡಿಕೆಯ ನಿಯಮದ ಗುಡಾರ ನಿರ್ಮಾಣಕ್ಕೆ ಬಳಸಿದ ವಸ್ತುಗಳ ಲೆಕ್ಕ ಇವು: ಮೋಶೆಯ ಆಜ್ಞೆಯ ಮೇರೆಗೆ ಯಾಜಕನಾದ ಆರೋನನ ಮಗನಾದ ಈತಾಮಾರನ ನಿರ್ದೇಶನದಲ್ಲಿ ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು. ಅಧ್ಯಾಯವನ್ನು ನೋಡಿ |
ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.
ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.