ವಿಮೋಚನಕಾಂಡ 38:23 - ಪರಿಶುದ್ದ ಬೈಬಲ್23 ದಾನ್‌ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಅವನಿಗೆ ಸಹಾಯ ಮಾಡಿದನು. ಒಹೊಲೀಯಾಬನು ನಿಪುಣನಾದ ಕೆಲಸಗಾರನೂ ನಕಾಸಿ ಕೆಲಸ ಮಾಡುವವನೂ ಆಗಿದ್ದನು. ಅವನು ಶ್ರೇಷ್ಠ ನಾರುಬಟ್ಟೆಯಲ್ಲಿ ನೀಲಿ, ನೇರಳೆ, ಕೆಂಪುದಾರಗಳಿಂದ ಬುಟೇದಾರೀ ಕೆಲಸ ಮಾಡಲು ನಿಪುಣನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು. ಇವನು ಶಿಲ್ಪಕಲೆ ಬಲ್ಲವನು. ಕಲಾತ್ಮಕ ಕೆಲಸವನ್ನು ನಿಯೋಜಿಸುವವನು ಮತ್ತು ನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸಮಾಡುವವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆ ಬಲ್ಲವನೂ ವಿಚಿತ್ರವಾದ ಕೆಲಸವನ್ನು ಕಲ್ಪಿಸುವವನೂ ನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ನೂಲಿನಿಂದ ಬುಟೇದಾರೀ ಕೆಲಸಮಾಡುವವನೂ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವನ ಜೊತೆಯಲ್ಲಿ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ, ಧೂಮ್ರ ಮತ್ತು ರಕ್ತವರ್ಣದ ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡುವವನೂ ಆಗಿದ್ದನು. ಅಧ್ಯಾಯವನ್ನು ನೋಡಿ |