Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:28 - ಪರಿಶುದ್ದ ಬೈಬಲ್‌

28 ಉಳಿದ ಐವತ್ತು ಪೌಂಡು ಬೆಳ್ಳಿಯನ್ನು, ಕೊಂಡಿಗಳನ್ನೂ ಪರದೆಯ ಕೋಲುಗಳನ್ನೂ ಮಾಡುವುದಕ್ಕೂ ಕಂಬಗಳಿಗೆ ಹೊದಿಸುವುದಕ್ಕೂ ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮಿಕ್ಕ ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಅಗುಳಿಗಳಿಗೆ ತಗಡುಗಳನ್ನು ಹೊದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮಿಕ್ಕ 34 ಕಿಲೋಗ್ರಾಂನಿಂದ ಕಂಬಗಳಿಗೆ ಕೊಂಡಿಗಳನ್ನು ಹಾಗು ಕಟ್ಟುಗಳನ್ನು ಮಾಡಿ ಅವುಗಳ ಬೋದಿಗೆಗಳಿಗೆ ತಗಡುಗಳನ್ನು ಹೊದಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ವಿುಕ್ಕ ಸಾವಿರದ ಏಳು ನೂರು ಎಪ್ಪತ್ತೈದು ತೊಲೆಯಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಬೋದಿಗೆಗಳಿಗೆ ತಗಡುಗಳನ್ನು ಹೊದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಒಂದರ ತೂಕ ಸುಮಾರು 34 ಕಿಲೋಗ್ರಾಂ ಇತ್ತು. ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:28
3 ತಿಳಿವುಗಳ ಹೋಲಿಕೆ  

ಅಂಗಳದ ಸುತ್ತಲಿರುವ ಕಂಬಗಳನ್ನೆಲ್ಲ ಬೆಳ್ಳಿಯ ಪರದೆ ಕೋಲುಗಳೊಡನೆ ಜೋಡಿಸಬೇಕು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದಲೂ ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದಲೂ ಮಾಡಿಸಬೇಕು.


ಯೆಹೋವನ ಪವಿತ್ರಸ್ಥಳ ಮತ್ತು ಪರದೆಗಳಿಗೆ ಬೇಕಾದ ನೂರು ಗದ್ದಿಗೇಕಲ್ಲುಗಳನ್ನು ಮಾಡಲು ಅವರು ಮೂರುಮುಕ್ಕಾಲು ಟನ್ ಬೆಳ್ಳಿಯನ್ನು ಉಪಯೋಗಿಸಿದರು. ಅವರು ಪ್ರತಿ ಗದ್ದಿಗೇಕಲ್ಲಿಗೆ ಎಪ್ಪತ್ತೈದು ಪೌಂಡು ಬೆಳ್ಳಿಯನ್ನು ಉಪಯೋಗಿಸಿದರು.


ಇಪ್ಪತ್ತಾರುವರೆ ಟನ್‌ಗಿಂತ ಹೆಚ್ಚು ತಾಮ್ರವನ್ನು ಯೆಹೋವನಿಗಾಗಿ ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು