Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:26 - ಪರಿಶುದ್ದ ಬೈಬಲ್‌

26 ಹೀಗೆ ನಿಲುವಂಗಿಯ ಕೆಳಅಂಚಿನ ಸುತ್ತಲೆಲ್ಲ ದಾಳಿಂಬೆ ಹಣ್ಣುಗಳೂ ಗೆಜ್ಜೆಗಳೂ ಇದ್ದವು. ಪ್ರತಿ ದಾಳಿಂಬೆ ಹಣ್ಣಿನ ನಡುವೆ ಒಂದೊಂದು ಗೆಜ್ಜೆ ಇತ್ತು. ಯಾಜಕರು ಯೆಹೋವನ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ನಿಲುವಂಗಿ ಇದಾಗಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗಾಗಿ ಇರುವ ಆ ನಿಲುವಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಚಿನ್ನದ ಗೆಜ್ಜೆಯೂ ದಾಳಿಂಬದಂತಿರುವ ಚಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಒಂದು ಗೆಜ್ಜೆ, ಒಂದು ದಾಳಿಂಬೆಯಂತಿರುವ ಚೆಂಡನ್ನು ಒಂದಾದ ಮೇಲೆ ಒಂದು ಸೇವೆಗೋಸ್ಕರ ಮಾಡಿದ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:26
9 ತಿಳಿವುಗಳ ಹೋಲಿಕೆ  

ಹೀಗೆ ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ಗೆಜ್ಜೆಗಳು ಮತ್ತು ದಾಳಿಂಬೆ ಹಣ್ಣುಗಳು ಇರಬೇಕು. ಪ್ರತಿ ಎರಡು ದಾಳಿಂಬೆ ಹಣ್ಣಿನ ನಡುವೆ ಗೆಜ್ಜೆ ಇರಬೇಕು.


ಹನ್ನೆರಡು ವರ್ಷಗಳಿಂದ ರಕ್ತಸ್ರಾವ ಕಾಯಿಲೆ ಹೊಂದಿದ್ದ ಒಬ್ಬ ಹೆಂಗಸು ಅಲ್ಲಿದ್ದಳು. ಆ ಹೆಂಗಸು ಯೇಸುವಿನ ಹಿಂದೆಯೇ ಬಂದು ಆತನ ಮೇಲಂಗಿಯ ತುದಿಯನ್ನು ಮುಟ್ಟಿದಳು.


ಮುಸುಕಿನೊಳಗಿರುವ ನಿನ್ನ ಕೆನ್ನೆಗಳು ದಾಳಿಂಬೆ ಹಣ್ಣಿನ ಎರಡು ಹೋಳುಗಳಂತಿವೆ.


ನಿನ್ನ ಅಂಗಾಂಗಗಳು ದಾಳಿಂಬೆ ಮರಗಳಿಂದಲೂ ರುಚಿಕರವಾದ ಹಣ್ಣಿನ ಮರಗಳಿಂದಲೂ ಗೋರಂಟಿ,


ನಿನ್ನ ತುಟಿಗಳು ರೇಷ್ಮೆಯ ಕೆಂಪುದಾರದಂತಿವೆ. ನಿನ್ನ ಬಾಯಿ ಸುಂದರವಾಗಿದೆ. ಮುಸುಕಿನೊಳಗಿರುವ ನಿನ್ನ ಕೆನ್ನೆಗಳು ದಾಳಿಂಬೆ ಹಣ್ಣಿನ ಎರಡು ಹೋಳುಗಳಂತಿವೆ.


“ನೂಲಿನಿಂದ ಮಾಡಿದ ಗೊಂಡೆಗಳನ್ನು ನಿಮ್ಮ ನಿಲುವಂಗಿಗಳ ನಾಲ್ಕು ಮೂಲೆಗಳಿಗೆ ಕಟ್ಟಬೇಕು.


ಬಟ್ಟೆಯ ಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳನ್ನು ಮಾಡಲು ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಬೇಕು. ಆ ದಾಳಿಂಬೆ ಹಣ್ಣಿನ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ನೇತಾಡುವಂತೆ ಸಿಕ್ಕಿಸಬೇಕು. ದಾಳಿಂಬೆ ಹಣ್ಣಿನ ಚೆಂಡುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಸಿಕ್ಕಿಸಬೇಕು.


ಬಳಿಕ ಅವರು ಅಪ್ಪಟ ಬಂಗಾರದ ಗೆಜ್ಜೆಗಳನ್ನು ಮಾಡಿದರು. ಅವರು ಈ ಗೆಜ್ಜೆಗಳನ್ನು ನಿಲುವಂಗಿಯ ಕೆಳಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳ ನಡುವೆ ತೂಗು ಹಾಕಿದರು.


ನಿಪುಣರಾದ ಕೆಲಸಗಾರರು ಆರೋನನಿಗೂ ಅವನ ಮಕ್ಕಳಿಗೂ ಅಂಗಿಗಳನ್ನು ಹೊಲಿದರು. ಈ ಅಂಗಿಗಳು ಶ್ರೇಷ್ಠವಾದ ನಾರುಬಟ್ಟೆಯಿಂದ ಮಾಡಲ್ಪಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು