ವಿಮೋಚನಕಾಂಡ 39:41 - ಪರಿಶುದ್ದ ಬೈಬಲ್41 ತರುವಾಯ ಮೋಶೆಗೆ ಪವಿತ್ರಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಯಾಜಕರಿಗಾಗಿ ಮಾಡಿದ ಬಟ್ಟೆಗಳನ್ನು ಅಂದರೆ ಯಾಜಕನಾದ ಆರೋನನಿಗೆ ಮತ್ತು ಅವನ ಮಕ್ಕಳಿಗಾಗಿ ಮಾಡಿದ ವಿಶೇಷ ಬಟ್ಟೆಗಳನ್ನು ಅವರು ತೋರಿಸಿದರು. ಅವರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಬಟ್ಟೆಗಳು ಇವುಗಳೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ದೇವಮಂದಿರದೊಳಗೆ ನಡೆಯುವ ದೇವರಕಾರ್ಯಗಳಿಗೆ ಅಲಂಕಾರ ವಸ್ತ್ರ ಅಂದರೆ ಆರೋನನಿಗೆ ಬೇಕಾದ ಪವಿತ್ರ ವಸ್ತ್ರಗಳನ್ನು ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳನ್ನು ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ದೇವಮಂದಿರದೊಳಗೆ ನಡೆಯುವ ಸೇವೆಗೋಸ್ಕರ ಬೇಕಾದ ಅಲಂಕಾರವಸ್ತ್ರ, ಅಂದರೆ ಆರೋನನಿಗೆ ಬೇಕಾದ ದೀಕ್ಷಾವಸ್ತ್ರ ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರ ಇವುಗಳನ್ನೂ ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ದೇವಮಂದಿರದೊಳಗೆ ನಡೆಯುವ ಸೇವೆಗೋಸ್ಕರ ಬೇಕಾದ ಅಲಂಕಾರವಸ್ತ್ರ ಅಂದರೆ ಆರೋನನಿಗೆ ಬೇಕಾದ ದೀಕ್ಷಾವಸ್ತ್ರ ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರ ಇವುಗಳನ್ನೂ ತಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಪರಿಶುದ್ಧಸ್ಥಳದ ಸೇವೆಗೋಸ್ಕರ ನೇಯ್ದ ಪರಿಶುದ್ಧ ವಸ್ತ್ರಗಳನ್ನು ಅಂದರೆ ಸೇವೆಮಾಡುವದಕ್ಕೆ ಯಾಜಕನಾದ ಆರೋನನಿಗೆ ಮತ್ತು ಅವನ ಪುತ್ರರಿಗೆ ಯಾಜಕವಸ್ತ್ರಗಳನ್ನು ತಂದರು. ಅಧ್ಯಾಯವನ್ನು ನೋಡಿ |