ವಿಮೋಚನಕಾಂಡ 39:5 - ಪರಿಶುದ್ದ ಬೈಬಲ್5 ಅವರು ನಡುಕಟ್ಟನ್ನು ಹೆಣೆದು ಏಫೋದಿಗೆ ಬಿಗಿಯಾಗಿ ಕಟ್ಟಿದರು. ಏಫೋದನ್ನು ಮಾಡಿದಂತೆಯೇ ಇದನ್ನು ಮಾಡಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡುವುದಕ್ಕೆ ಚಿನ್ನದ ದಾರ, ಶ್ರೇಷ್ಠ ನಾರುಬಟ್ಟೆಯನ್ನು ಮತ್ತು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕವಚದ ಮೇಲಿರುವ ಕಸೂತಿ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲು, ಚಿನ್ನದ ದಾರಗಳಿಂದಲು ಹಾಗೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಮಾಡಲ್ಪಟ್ಟಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕವಚದ ಮೇಲಿದ್ದ ಅಪೂರ್ವವಾದ ಕಸೂತಿ ನಡುಕಟ್ಟು ಕವಚಕ್ಕೆ ಅಂಗವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದಲೂ, ಚಿನ್ನದ ದಾರದಿಂದಲೂ ಮತ್ತು ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲು ತಯಾರಿಸಲಾಗಿತ್ತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕವಚದ ಮೇಲಿರುವ ವಿಚಿತ್ರವಾದ ಬುಟೇದಾರಿಯ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಉಂಟಾಗಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದರ ಮೇಲಿರುವ ಅದರ ಮೇಲಿರುವ ಕಸೂತಿ ಕೆಲಸದ ಏಫೋದಿನ ನಡುಕಟ್ಟನ್ನು ಒಂದೇ ರೀತಿಯ ವಸ್ತುಗಳಿಂದ ತಯಾರಿಸಬೇಕು ಅಂದರೆ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಲಾಗಿತ್ತು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು. ಅಧ್ಯಾಯವನ್ನು ನೋಡಿ |