Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:11 - ಪರಿಶುದ್ದ ಬೈಬಲ್‌

11 ಆಗ ಯೆಹೋವನು ಅವನಿಗೆ, “ಮನುಷ್ಯನ ಬಾಯನ್ನು ಯಾರು ಮಾಡಿದರು? ಮನುಷ್ಯನನ್ನು ಕಿವುಡನನ್ನಾಗಿ ಅಥವಾ ಮೂಕನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನನ್ನು ಕುರುಡನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನಿಗೆ ದೃಷ್ಟಿಕೊಟ್ಟವನು ಯಾರು? ಯೆಹೋವನಾದ ನಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಸರ್ವೇಶ್ವರ, “ಮನುಷ್ಯರಿಗೆ ಬಾಯಿಕೊಟ್ಟವರು ಯಾರು? ಒಬ್ಬನನ್ನು ಮೂಕನಾಗಿ, ಮತ್ತೊಬ್ಬನನ್ನು ಕಿವುಡನಾಗಿ, ಇನ್ನೊಬ್ಬನನ್ನು ಕಣ್ಣುಳ್ಳವನಾಗಿ, ಮಗದೊಬ್ಬನನ್ನು ಕಣ್ಣಿಲ್ಲದವನಾಗಿ ಇಡುವವರು ಯಾರು? ಸರ್ವೇಶ್ವರನಾಗಿರುವ ನಾನೇ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮನುಷ್ಯರಿಗೆ ಬಾಯಿ ಕೊಟ್ಟವರಾರು? ಒಬ್ಬನು ಮೂಕನಾಗಿ ಮತ್ತೊಬ್ಬನು ಕಿವುಡನಾಗಿ ಒಬ್ಬನು ಕಣ್ಣುಳ್ಳವನಾಗಿ ಮತ್ತೊಬ್ಬನು ಕಣ್ಣಿಲ್ಲದವನಾಗಿ ಇರಬೇಕೆಂದು ನೇವಿುಸಿದವರಾರು? ಯೆಹೋವನಾಗಿರುವ ನಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಯೆಹೋವ ದೇವರು ಅವನಿಗೆ, “ಮನುಷ್ಯರಿಗೆ ಬಾಯಿ ಕೊಟ್ಟಾತನೂ ಯಾರು? ಮೂಕರನ್ನೂ ಕಿವುಡರನ್ನೂ ಮಾಡಿದಾತನೂ ಯಾರು? ದೃಷ್ಟಿಯುಳ್ಳವರನ್ನೂ ದೃಷ್ಟಿಯಿಲ್ಲದವರನ್ನೂ ಮಾಡಿದಾತನೂ ಯಾರು? ಯೆಹೋವ ದೇವರಾದ ನಾನೇ ಅಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:11
18 ತಿಳಿವುಗಳ ಹೋಲಿಕೆ  

ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ಯೆಹೋವನು ಕುರುಡರಿಗೆ ದೃಷ್ಟಿಕೊಡುವನು. ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು. ಯೆಹೋವನು ನೀತಿವಂತರನ್ನು ಪ್ರೀತಿಸುವನು.


ಆ ಸೆರಾಫಿಯನು ಉರಿಯುವ ಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿದನು. ಆಗ ಆ ದೂತನು, “ಇಗೋ, ಈ ಉರಿಯುವ ಕೆಂಡವು ನಿನ್ನ ತುಟಿಗಳಿಗೆ ತಗಲಿದ್ದರಿಂದ ನೀನು ಮಾಡಿದ ಕೆಟ್ಟಕಾರ್ಯಗಳೆಲ್ಲಾ ನಿನ್ನಿಂದ ತೊಲಗಿ ಹೋದವು. ಈಗ ನಿನ್ನ ಪಾಪವು ಅಳಿಸಿಹಾಕಲ್ಪಟ್ಟಿದೆ” ಎಂದು ಹೇಳಿದನು.


ಕಿವಿಗಳನ್ನು ಸೃಷ್ಟಿಸಿದಾತನಿಗೆ, ಕೇಳುವುದಿಲ್ಲವೇ? ಕಣ್ಣುಗಳನ್ನು ಸೃಷ್ಟಿಸಿದಾತನಿಗೆ ಕಾಣುವುದಿಲ್ಲವೇ?


ನನ್ನ ಯೆಹೋವನೇ, ನನ್ನ ಬಾಯಿ ತೆರೆದು ನಿನ್ನನ್ನು ಕೊಂಡಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ.


ಆಗ ಯೆರೆಮೀಯನೆಂಬ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಬೇಕೆಂಬುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ.


ಅವನು ಬರುವ ಹಿಂದಿನ ದಿವಸದ ಸಾಯಂಕಾಲ ನನ್ನ ಒಡೆಯನಾದ ಯೆಹೋವನ ಆತ್ಮನಿಂದ ಪರವಶನಾದೆನು. ದೇವರು ನನ್ನನ್ನು ಮಾತನಾಡದಂತೆ ಮಾಡಿದ್ದನು. ಆ ಸಮಯದಲ್ಲಿ ಆ ಮನುಷ್ಯನು ನನ್ನ ಬಳಿಗೆ ಬಂದನು. ಆಗ ದೇವರು ನನ್ನ ಬಾಯನ್ನು ತೆರೆದು ನಾನು ಮಾತನಾಡುವಂತೆ ಮಾಡಿದನು.


ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ನೀನು ಕುರುಡರ ಕಣ್ಣುಗಳಿಗೆ ದೃಷ್ಟಿಯನ್ನು ಕೊಡುವೆ; ಸೆರೆಮನೆಯಲ್ಲಿರುವ ಎಷ್ಟೋ ಜನರನ್ನು ನೀನು ಬಿಡಿಸುವೆ. ಕತ್ತಲೆಯಲ್ಲಿ ವಾಸಿಸುವ ಎಷ್ಟೋ ಜನರನ್ನು ನೀನು ಸೆರೆಮನೆಯಿಂದ ಬಿಡಿಸುವೆ.


ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು.


ಆ ಕೂಡಲೇ ಜಕರೀಯನು ಮತ್ತೆ ಮಾತಾಡಬಲ್ಲವನಾಗಿ ದೇವರನ್ನು ಸ್ತುತಿಸತೊಡಗಿದನು.


ಆದರೆ ಇತರರು, “ದೆವ್ವದಿಂದ ಹುಚ್ಚು ಹಿಡಿದಿರುವ ಮನುಷ್ಯನು ಈ ರೀತಿಯ ಸಂಗತಿಗಳನ್ನು ಹೇಳುವುದಿಲ್ಲ. ಕುರುಡರ ಕಣ್ಣುಗಳನ್ನು ಗುಣಪಡಿಸಲು ದೆವ್ವಕ್ಕೆ ಸಾಧ್ಯವೇ? ಇಲ್ಲ!” ಎಂದು ಹೇಳಿದರು.


ಆದ್ದರಿಂದ ನಾವು ಕೆಳಗೆ ಹೋಗಿ ಅವರ ಭಾಷೆಯನ್ನು ತಾರುಮಾರು ಮಾಡೋಣ; ಆಗ ಅವರು ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿದನು.


ನಮಗೆ ನೋಡಲು ಕಣ್ಣುಗಳಿವೆ. ಕೇಳಲು ಕಿವಿಗಳಿವೆ. ಅವುಗಳನ್ನು ನಮಗೋಸ್ಕರ ಉಂಟುಮಾಡಿದವನು ಯೆಹೋವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು