ವಿಮೋಚನಕಾಂಡ 4:13 - ಪರಿಶುದ್ದ ಬೈಬಲ್13 ಆದರೆ ಮೋಶೆ, “ನನ್ನ ಯೆಹೋವನೇ, ದಯಮಾಡಿ ನನ್ನ ಬದಲಾಗಿ ಬೇರೊಬ್ಬನನ್ನು ಕಳುಹಿಸು” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ಮೋಶೆ, “ಸ್ವಾಮೀ, ಈ ಕಾರ್ಯಕ್ಕೆ ತಾವು ಬೇರೊಬ್ಬನನ್ನು ನೇಮಿಸಬೇಕು,” ಎನ್ನಲು, ಸರ್ವೇಶ್ವರ ಅವನ ಮೇಲೆ ಸಿಟ್ಟುಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಕ್ಕೆ ಮೋಶೆ - ಸ್ವಾಮೀ, ಈ ಕಾರ್ಯಕ್ಕೆ ಬೇರೊಬ್ಬನನ್ನು ನೇವಿುಸಬೇಕು ಎನ್ನಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದಕ್ಕೆ ಮೋಶೆಯು, “ಸ್ವಾಮಿ, ನೀವು ಬೇರೊಬ್ಬನನ್ನು ಕಳುಹಿಸಿರಿ, ಎಂದು ಬೇಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.
ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”