Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:16 - ಪರಿಶುದ್ದ ಬೈಬಲ್‌

16 ಆರೋನನು ಜನರೊಂದಿಗೂ ನಿನ್ನ ಪರವಾಗಿಯೂ ಮಾತಾಡುವನು. ನೀನು ಮಹಾರಾಜನಂತೆ ಇರುವೆ; ಅವನು ನಿನಗೆ ಅಧಿಕೃತ ಮಾತುಗಾರನಂತೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ನಿನಗೆ ಬದಲಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿನ್ನ ಪರವಾಗಿ ಅವನೇ ಆ ಜನರ ಸಂಗಡ ಮಾತಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತೆ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನೇ ನಿನಗೋಸ್ಕರ ಜನರ ಸಂಗಡ ಮಾತಾಡುವನು. ಅವನು ನಿನಗೆ ಬಾಯಂತಿರುವನು; ನೀನು ಅವನಿಗೆ ದೇವರಂತಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ನಿನ್ನ ಪರವಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿರುವನು, ನೀನು ಅವನಿಗೆ ದೇವರಂತಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:16
7 ತಿಳಿವುಗಳ ಹೋಲಿಕೆ  

ಕೇಳು, ನಾನು ನಿನಗೆ ಕೆಲವು ಸಲಹೆಗಳನ್ನು ಕೊಡುವೆನು. ಯೆಹೋವನು ನಿನ್ನೊಡನೆ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನೀನು ಮಾಡಬೇಕಾದದ್ದು ಇವೇ: ಜನರ ವ್ಯಾಜ್ಯಗಳನ್ನು ನೀನು ಕೇಳುವುದನ್ನು ಮುಂದುವರಿಸಬೇಕು; ಈ ಸಂಗತಿಗಳ ಬಗ್ಗೆ ನೀನು ದೇವರೊಂದಿಗೆ ಮಾತಾಡುವುದನ್ನೂ ಮುಂದುವರಿಸಬೇಕು;


ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ: “ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು.


ಈಗ ಹೋಗು. ನೀನು ಮಾತಾಡುವಾಗ ನಾನೇ ನಿನ್ನೊಂದಿಗಿರುವೆನು. ನೀನು ಹೇಳಬೇಕಾದ ಮಾತುಗಳನ್ನು ನಾನು ನಿನಗೆ ಕೊಡುವೆನು” ಎಂದು ಹೇಳಿದನು.


ಆಗ ಆರೋನನು ಜನರೊಂದಿಗೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸಿದನು. ಬಳಿಕ ಮೋಶೆ ಜನರೆಲ್ಲರೂ ನೋಡುವಂತೆ ಅದ್ಭುತಕಾರ್ಯಗಳನ್ನು ಮಾಡಿದನು.


ಅನಂತರ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲಿಪಿಕಾರ ಬಾರೂಕನಿಗೆ ಕೊಟ್ಟನು. ರಾಜ ಯೆಹೋಯಾಕೀಮನು ಸುಟ್ಟುಹಾಕಿದ ಸುರುಳಿಯಲ್ಲಿದ್ದ ಸಂದೇಶವನ್ನೇ ಯೆರೆಮೀಯನು ಹೇಳಿದಂತೆಲ್ಲ ಬಾರೂಕನು ಸುರುಳಿಯ ಮೇಲೆ ಬರೆದನು. ಬೇರೆ ಹಲವು ಸಂದೇಶಗಳನ್ನು ಎರಡನೇ ಸುರುಳಿಯಲ್ಲಿ ಸೇರಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು