ವಿಮೋಚನಕಾಂಡ 4:17 - ಪರಿಶುದ್ದ ಬೈಬಲ್17 ಆದ್ದರಿಂದ ಹೋಗು. ನಿನ್ನ ಊರುಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಈ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇದಲ್ಲದೆ ಈ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗಬೇಕು; ಇದರಿಂದಲೇ ಆ ಮಹತ್ಕಾರ್ಯಗಳನ್ನು ಮಾಡುವಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಳ್ಳಬೇಕು. ಇದರಿಂದಲೇ ನೀನು ಸೂಚಕಕಾರ್ಯಗಳನ್ನು ಮಾಡುವೆ,” ಎಂದರು. ಅಧ್ಯಾಯವನ್ನು ನೋಡಿ |
ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ?’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ?’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.