ವಿಮೋಚನಕಾಂಡ 4:20 - ಪರಿಶುದ್ದ ಬೈಬಲ್20 ಆದ್ದರಿಂದ ಮೋಶೆ ತನ್ನ ಹೆಂಡತಿಯನ್ನೂ ಗಂಡುಮಕ್ಕಳನ್ನೂ ಕತ್ತೆಗಳ ಮೇಲೆ ಕುಳ್ಳಿರಿಸಿ ಈಜಿಪ್ಟ್ ದೇಶಕ್ಕೆ ಮರಳಿ ಪ್ರಯಾಣ ಮಾಡಿದನು. ಮೋಶೆಯು ಯೆಹೋವನ ಶಕ್ತಿಯಿಂದ ಕೂಡಿದ ತನ್ನ ಊರುಗೋಲನ್ನು ಹಿಡಿದುಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಕುಳ್ಳಿರಿಸಿ ಅವರನ್ನು ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಜೊತೆಯಲ್ಲಿ ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದ್ದರಿಂದ ಮೋಶೆ ತನ್ನ ಮಡದಿ ಮಕ್ಕಳನ್ನು ಹೇಸರ ಕತ್ತೆಯ ಮೇಲೆ ಏರಿಸಿಕೊಂಡು ಈಜಿಪ್ಟಿಗೆ ಹೊರಟುಹೋದನು. ದೇವದಂಡ ಅವನ ಕೈಯಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಹತ್ತಿಸಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರೆದುಕೊಂಡು ಅವರನ್ನು ಕತ್ತೆಯ ಮೇಲೆ ಕುಳ್ಳಿರಿಸಿ, ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಬಂದನು. ಇದಲ್ಲದೆ ದೇವರ ಕೋಲನ್ನು ಕೈಯಲ್ಲಿ ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |