Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:23 - ಪರಿಶುದ್ದ ಬೈಬಲ್‌

23 ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆಂದು ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಫರೋಹನೇ, ನಾನು ನಿನಗೆ ಹೇಳುವುದೇನೆಂದರೆ: “ನನ್ನ ಸೇವೆಮಾಡುವಂತೆ ನನ್ನ ಮಗನನ್ನು ಕಳುಹಿಸು.” ನೀನು ಅವನನ್ನು ಕಳುಹಿಸುವುದನ್ನು ನಿರಾಕರಿಸಿದರೆ, ನಾನು ನಿನ್ನ ಮಗನನ್ನು ಅಂದರೆ, ನಿನ್ನ ಜೇಷ್ಠಪುತ್ರನನ್ನು ಕೊಲ್ಲುವೆನು,’ ಎಂದು ತಿಳಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:23
22 ತಿಳಿವುಗಳ ಹೋಲಿಕೆ  

ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.


ಈಜಿಪ್ಟಿನ ಚೊಚ್ಚಲು ಮಕ್ಕಳೆಲ್ಲರೂ ಅಂದರೆ ಫರೋಹನ ಚೊಚ್ಚಲು ಮಗನಿಂದಿಡಿದು ಧಾನ್ಯವನ್ನು ಬೀಸುವ ಸೇವಕಿಯ ಚೊಚ್ಚಲು ಮಗನವರೆಗೂ ಇರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಇದಲ್ಲದೆ ಚೊಚ್ಚಲು ಪಶುಗಳೂ ಸಾಯುತ್ತವೆ.


ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು.


ಬಳಿಕ ದೇವರು ಈಜಿಪ್ಟ್ ದೇಶದ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಕೊಂದುಹಾಕಿದನು.


ಈಜಿಪ್ಟಿನವರ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು. ಹಾಮನ ಕುಲಕ್ಕೆ ಸೇರಿದ ಪ್ರತಿಯೊಬ್ಬ ಚೊಚ್ಚಲ ಮಗನನ್ನು ಆತನು ಕೊಂದುಹಾಕಿದನು.


‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ. ಆತನ ಜನರು ಅರಣ್ಯದಲ್ಲಿ ಆತನನ್ನು ಆರಾಧಿಸುವುದಕ್ಕೆ ನೀನು ಅವರಿಗೆ ಅಪ್ಪಣೆಕೊಡಬೇಕೆಂದು ಆತನು ನಿನಗೆ ಆಜ್ಞಾಪಿಸುತ್ತಾನೆ. ಇದುವರೆಗೆ ನೀನು ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.


ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅಪ್ಪಣೆಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು.


“ಹೋಗು, ಇಸ್ರೇಲರನ್ನು ಈಜಿಪ್ಟಿನಿಂದ ಕಳುಹಿಸಬೇಕೆಂದು ಫರೋಹನಿಗೆ ಹೇಳು” ಅಂದನು.


ಆಗ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗಿ ಯೆಹೋವನು ಹೀಗೆನ್ನುತ್ತಾನೆ ಎಂದು ಹೇಳು: ‘ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ.


ಯೆಹೋವನು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಬಳಿಗೆ ಹೋಗು. ಫರೋಹನು ನದಿಗೆ ಹೋಗುವನು. ನೀನು ಅವನಿಗೆ, ‘ಯೆಹೋವನು ಹೀಗೆನ್ನುತ್ತಾನೆ: ನನ್ನ ಜನರು ಹೋಗಿ ನನ್ನನ್ನು ಆರಾಧಿಸಲಿ!


ಆಗ ಯೆಹೋವನು ಮೋಶೆಗೆ, “ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು: ‘ಇಬ್ರಿಯರ ದೇವರಾದ ಯೆಹೋವನು ಹೇಳುವುದೇನೆಂದರೆ, ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ.


ಬಳಿಕ ಯೆಹೋವನು ಮೋಶೆಗೆ, “ಮುಂಜಾನೆ ಎದ್ದು ಫರೋಹನ ಬಳಿಗೆ ಹೋಗಿ, ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನನ್ನನ್ನು ಆರಾಧಿಸಲು ನನ್ನ ಜನರು ಹೋಗಲಿ!


ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!


ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ಸಂಗತಿಯನ್ನು ಮೋಶೆ ಇತ್ರೋನನಿಗೆ ಹೇಳಿದನು. ಯೆಹೋವನು ಫರೋಹನಿಗೆ ಮತ್ತು ಈಜಿಪ್ಟಿನವರಿಗೆ ಮಾಡಿದ ಸಂಗತಿಗಳ ಬಗ್ಗೆ ಮೋಶೆಯು ಹೇಳಿದನು. ದಾರಿಯ ಉದ್ದಕ್ಕೂ ತಮಗೆ ಬಂದೊದಗಿದ ಎಲ್ಲಾ ಸಮಸ್ಯೆಗಳ ಬಗ್ಗೆ ಮತ್ತು ತೊಂದರೆ ಬಂದೊದಗಿದ ಪ್ರತಿ ಸಾರಿಯೂ ಯೆಹೋವನು ಇಸ್ರೇಲರನ್ನು ಹೇಗೆ ರಕ್ಷಿಸಿದನೆಂಬುದನ್ನು ಮೋಶೆಯು ತನ್ನ ಮಾವನಿಗೆ ತಿಳಿಸಿದನು.


ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ಸಂಹರಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.


“ಯೆಹೋವನಾದ ನಾನು ಇಸ್ರೇಲನ್ನು ಸಣ್ಣ ಮಗುವಾಗಿದ್ದಾಗಲೇ ಪ್ರೀತಿಸಿದೆನು. ನನ್ನ ಮಗನನ್ನು ಈಜಿಪ್ಟಿನಿಂದ ಹೊರಕರೆದೆನು.


“ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.


ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆ’ ಎಂದು ಹೇಳು. ಆಗ ಧೂಳು ಈಜಿಪ್ಟಿನಲ್ಲೆಲ್ಲಾ ಹೇನುಗಳಾಗುವವು” ಎಂದು ಹೇಳಿದನು.


ಅವರು ಹಾಗೆಯೇ ಮಾಡಿದರು. ಆರೋನನು ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆದನು. ಆಗ ಈಜಿಪ್ಟಿನ ಪ್ರತಿಯೊಂದು ಸ್ಥಳದ ಧೂಳು ಹೇನುಗಳಾಗಿ ಪ್ರಾಣಿಗಳ ಮೇಲೂ ಜನರ ಮೇಲೂ ಏರಿಕೊಂಡವು.


ನೀನು ಅವರನ್ನು ಬಿಡದೆ ಇನ್ನೂ ತಡೆದರೆ,


ನೀನು ನನ್ನ ಜನರನ್ನು ಕಳುಹಿಸಿಕೊಡದಿದ್ದರೆ, ನಾಳೆಯೇ ನಿನ್ನ ದೇಶದೊಳಗೆ ಮಿಡತೆಗಳನ್ನು ತರುವೆನು.


ಈಜಿಪ್ಟಿನಲ್ಲಿ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡು ನಮ್ಮನ್ನು ಕಳುಹಿಸಿಕೊಡಲಿಲ್ಲ. ಆಗ ಯೆಹೋವನು ಆ ದೇಶದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. (ಯೆಹೋವನು ಚೊಚ್ಚಲು ಪಶುಗಳನ್ನು ಮತ್ತು ಚೊಚ್ಚಲು ಗಂಡುಮಕ್ಕಳನ್ನು ಕೊಂದನು.) ಆದ್ದರಿಂದ ನಾವು ಚೊಚ್ಚಲಾದ ಪ್ರತಿಯೊಂದು ಗಂಡುಪಶುವನ್ನು ಯೆಹೋವನಿಗೆ ಯಜ್ಞವಾಗಿ ಅರ್ಪಿಸುತ್ತೇವೆ. ಈ ಕಾರಣದಿಂದಲೇ, ನಮ್ಮ ಪ್ರತಿಯೊಂದು ಗಂಡುಮಗುವನ್ನು ಯೆಹೋವನಿಂದ ಮತ್ತೆ ಖರೀದಿ ಮಾಡುತ್ತೇವೆ’ ಎಂದು ಹೇಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು