ವಿಮೋಚನಕಾಂಡ 4:8 - ಪರಿಶುದ್ದ ಬೈಬಲ್8 ಆಗ ಯೆಹೋವನು ಅವನಿಗೆ, “ನೀನು ನಿನ್ನ ಊರುಗೋಲಿನಿಂದ ಸೂಚಕಕಾರ್ಯ ಮಾಡುವಾಗ ಜನರು ನಿನ್ನನ್ನು ನಂಬುವರು; ನಿನ್ನ ಮಾತಿಗೆ ಲಕ್ಷ್ಯಕೊಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಯೆಹೋವನು ಅವನಿಗೆ, “ಅವರು ನಿನ್ನನ್ನು ನಂಬದೆ, ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ತಿರಸ್ಕರಿಸಿದರೂ, ಎರಡನೆಯ ಸೂಚಕಕಾರ್ಯವನ್ನು ನಂಬುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಸರ್ವೇಶ್ವರ ಅವನಿಗೆ, “ಆ ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಅರ್ಥಮಾಡಿಕೊಳ್ಳದೆ ಹೋದರೂ ಎರಡನೆಯದನ್ನು ಅರ್ಥಮಾಡಿಕೊಂಡು ನಂಬುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಯೆಹೋವನು ಅವನಿಗೆ - ಅವರು ನಿನ್ನನ್ನು ನಂಬದೆ ಮೊದಲನೆಯ ಮಹತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಯೆಹೋವ ದೇವರು, “ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ಹೋದರೂ, ಎರಡನೆಯ ಸೂಚಕಕಾರ್ಯವನ್ನು ನೋಡಿ ನಂಬುವರು. ಅಧ್ಯಾಯವನ್ನು ನೋಡಿ |
ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.