Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:14 - ಪರಿಶುದ್ದ ಬೈಬಲ್‌

14 ಬಳಿಕ ಅವನ ಪುತ್ರರಿಗೆ ಬಟ್ಟೆಗಳನ್ನು ತೊಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ನಂತರ ನೀನು ಅವನ ಮಕ್ಕಳನ್ನು ಬರಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅನಂತರ ಅವನ ಮಕ್ಕಳನ್ನು ಬರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಮೇಲೆ ನೀನು ಅವನ ಮಕ್ಕಳನ್ನು ಬರಮಾಡಿ ಅವರಿಗೆ ಅಂಗಿಗಳನ್ನು ತೊಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನ ಪುತ್ರರನ್ನು ನೀನು ಬರಮಾಡಿಕೊಂಡು, ಅವರಿಗೆ ಅಂಗಿಗಳನ್ನು ತೊಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:14
11 ತಿಳಿವುಗಳ ಹೋಲಿಕೆ  

ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ದೇವರು ನಂಬಿಗಸ್ತನಾಗಿದ್ದಾನೆ. ದೇವರ ಮಗನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಜೀವದಲ್ಲಿ ಪಾಲುಹೊಂದಬೇಕೆಂದು ನಮ್ಮನ್ನು ಕರೆದಿರುವಾತನು ದೇವರೇ.


ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.


ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು.


ವಾಕ್ಯ ಎಂಬಾತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು. ಆತನಿಂದಲೇ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


ಬಳಿಕ ಆರೋನನಿಗೆ ವಿಶೇಷ ಬಟ್ಟೆಯನ್ನು ತೊಡಿಸು. ತೈಲದಿಂದ ಅವನನ್ನು ಅಭಿಷೇಕಿಸಿ ಪವಿತ್ರಗೊಳಿಸು. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.


ಅವರ ತಂದೆಯನ್ನು ಅಭಿಷೇಕಿಸಿದಂತೆ ಪುತ್ರರನ್ನೂ ಅಭಿಷೇಕಿಸು. ಆಗ ಅವರು ಯಾಜಕರಾಗಿ ತಲೆತಲೆಮಾರುಗಳವರೆಗೆ ನನ್ನ ಸೇವೆ ಮಾಡಬಹುದು. ನೀನು ಅವರನ್ನು ಅಭಿಷೇಕಿಸಿದಾಗ, ಅವರು ಯಾಜಕರಾಗುವರು. ಇನ್ನು ಮುಂದೆ ಆ ಕುಟುಂಬವು ಯಾಜಕರಾಗಿ ಮುಂದುವರಿಯುವುದು” ಎಂದು ಹೇಳಿದನು.


“ತರುವಾಯ ಆರೋನನ ಪುತ್ರರನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಅವರಿಗೆ ಹೆಣೆದ ಅಂಗಿಗಳನ್ನು ತೊಡಿಸು.


ಬಳಿಕ ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟನ್ನು ಕಟ್ಟಿದನು. ಬಳಿಕ ಅವರ ತಲೆಗಳಿಗೆ ಮುಂಡಾಸಗಳನ್ನು ಇಟ್ಟನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು