Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:18 - ಪರಿಶುದ್ದ ಬೈಬಲ್‌

18 ಯೆಹೋವನು ಹೇಳಿದಂತೆಯೇ ಮೋಶೆಯು ಪವಿತ್ರಗುಡಾರವನ್ನು ನಿಲ್ಲಿಸಿದನು. ಅವನು ಮೊದಲು ಗದ್ದಿಗೇಕಲ್ಲುಗಳನ್ನು ಕೆಳಗೆ ಇರಿಸಿದನು. ಬಳಿಕ ಅವನು ಗದ್ದಿಗೇಕಲ್ಲುಗಳ ಮೇಲೆ ಚೌಕಟ್ಟುಗಳನ್ನು ಇರಿಸಿದನು. ಬಳಿಕ ಅವನು ಅಗುಳಿಗಳನ್ನಿರಿಸಿ ಕಂಬಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವನು ಗುಡಾರವನ್ನು ಎತ್ತಿಸಿ ಅದರ ಗದ್ದಿಗೇಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಗುಡಾರವನ್ನು ಎತ್ತಿಸಿ ಅದರ ಗದ್ದಿಗೇ ಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ, ಅದರ ಕಾಲುಗಳನ್ನು ಬಿಗಿದು, ಅದರ ಚೌಕಟ್ಟುಗಳನ್ನು ಇರಿಸಿ, ಅಗುಳಿಗಳನ್ನು ಹಾಕಿ, ಅದರ ಸ್ತಂಭಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:18
15 ತಿಳಿವುಗಳ ಹೋಲಿಕೆ  

ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.


ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.


ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.


ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ಅಲ್ಲಿ ವಾಸಿಸುವವರಲ್ಲಿ ಯಾರೂ “ನನಗೆ ಸೌಖ್ಯವಿಲ್ಲ” ಎಂದು ಹೇಳುವುದಿಲ್ಲ. ಅಲ್ಲಿ ವಾಸಿಸುವವರೆಲ್ಲಾ ತಮ್ಮ ಪಾಪಗಳಿಗೆ ಕ್ಷಮೆಹೊಂದಿದವರಾಗಿದ್ದಾರೆ.


ಅಲ್ಲದೆ ನಾನು ನಿಮ್ಮ ಮಧ್ಯದಲ್ಲಿ ನನ್ನ ಪವಿತ್ರಗುಡಾರವನ್ನು ಇಡುವೆನು. ನಾನು ನಿಮ್ಮಿಂದ ದೂರ ಹೋಗುವುದಿಲ್ಲ.


“ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ದೇವದರ್ಶನಗುಡಾರವಾದ ಪವಿತ್ರಗುಡಾರವನ್ನು ಎತ್ತಿನಿಲ್ಲಿಸು.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆದ್ದರಿಂದ ಪವಿತ್ರಗುಡಾರವು, ಅವರು ಈಜಿಪ್ಟನ್ನು ಬಿಟ್ಟಕಾಲದಿಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸ್ಥಾಪಿಸಲ್ಪಟ್ಟಿತು.


ನಂತರ, ಮೋಶೆಯು ಪವಿತ್ರಗುಡಾರದ ಮೇಲೆ ಹೊರಗಣ ಡೇರೆಯನ್ನು ಹಾಕಿಸಿದನು. ಬಳಿಕ ಅವನು ಹೊರಗಿನ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಈ ಕಾರ್ಯಗಳನ್ನು ಮಾಡಿದನು.


ಈಜಿಪ್ಟಿನಿಂದ ಇಸ್ರೇಲರನ್ನು ಹೊರತಂದ ಸಮಯದಲ್ಲಿ ನಾನು ಆಲಯದಲ್ಲಿ ವಾಸಮಾಡಲಿಲ್ಲ. ನಾನು ಗುಡಾರದಲ್ಲಿ ವಾಸಮಾಡುತ್ತಾ ಸಂಚರಿಸಿದೆನು. ಗುಡಾರವೇ ನನ್ನ ಆಲಯವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು