ವಿಮೋಚನಕಾಂಡ 40:20 - ಪರಿಶುದ್ದ ಬೈಬಲ್20 ಮೋಶೆಯು ಒಡಂಬಡಿಕೆಯ ಆಜ್ಞಾಶಾಸನಗಳನ್ನು ತೆಗೆದುಕೊಂಡು ಪವಿತ್ರ ಪೆಟ್ಟಿಗೆಯಲ್ಲಿಟ್ಟನು. ಮೋಶೆಯು ಪೆಟ್ಟಿಗೆಯ ಎರಡು ಕಡೆಗಳಲ್ಲಿ ಕೋಲುಗಳನ್ನು ಇರಿಸಿದನು. ಬಳಿಕ ಅವನು ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಕೊಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನು ಆಜ್ಞಾಶಾಸನಗಳನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿಟ್ಟು, ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ, ಮಂಜೂಷದ ಮೇಲೆ ಕರುಣಾಸನವನ್ನು ಇಟ್ಟನು. ಅಧ್ಯಾಯವನ್ನು ನೋಡಿ |
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.