Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:23 - ಪರಿಶುದ್ದ ಬೈಬಲ್‌

23 ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿ ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನಿರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ ಮೇಜಿನ ಮೇಲೆ ರೊಟ್ಟಿಗಳನ್ನು ಕ್ರಮವಾಗಿ ಯೆಹೋವನ ಸನ್ನಿಧಿಯಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದರ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿ ರೊಟ್ಟಿಗಳನ್ನು ಕ್ರಮವಾಗಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದರ ಮೇಲೆ ಯೆಹೋವನ ಸನ್ನಿಧಿಯಲ್ಲಿ ರೊಟ್ಟಿಗಳನ್ನು ಕ್ರಮವಾಗಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:23
8 ತಿಳಿವುಗಳ ಹೋಲಿಕೆ  

ಬಳಿಕ ಮೇಜನ್ನು ಒಳಗೆ ತರಿಸಿ ಮೇಜಿನ ಮೇಲಿರಬೇಕಾದ ವಸ್ತುಗಳನ್ನು ಅದರ ಮೇಲಿರಿಸು. ದೀಪಸ್ತಂಭವನ್ನು ಗುಡಾರದಲ್ಲಿ ಇರಿಸು. ದೀಪಸ್ತಂಭದಲ್ಲಿ ಸರಿಯಾದ ಜಾಗಗಳಲ್ಲಿ ಹಣತೆಗಳನ್ನು ಇರಿಸು.


ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅವು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು.


ಈ ಸ್ಥಳವು ಗುಡಾರದ ಒಳಗಿತ್ತು. ಗುಡಾರದ ಮೊದಲ ಆವರಣವನ್ನು ಪವಿತ್ರ ಸ್ಥಳವೆಂದು ಕರೆಯುತ್ತಿದ್ದರು. ಪವಿತ್ರ ಸ್ಥಳದಲ್ಲಿ ದೀಪಸ್ತಂಭ, ಮೇಜು ಮತ್ತು ದೇವರಿಗೆ ಅರ್ಪಿಸಲ್ಪಟ್ಟ ರೊಟ್ಟಿಗಳಿದ್ದವು.


ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.


ಬಳಿಕ ಮೋಶೆಯು ದೀಪಸ್ತಂಭವನ್ನು ಪವಿತ್ರಗುಡಾರದೊಳಗೆ ಇರಿಸಿದನು. ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನಿರಿಸಿದನು.


“ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿ ರೊಟ್ಟಿಯನ್ನು ಮಾಡಲು ಆರು ಸೇರು ಹಿಟ್ಟನ್ನು ಉಪಯೋಗಿಸಬೇಕು.


ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿರುವ ಚಿನ್ನದ ಮೇಜಿನ ಮೇಲೆ ಎರಡು ಸಾಲಾಗಿ ಇಡಬೇಕು. ಒಂದೊಂದು ಸಾಲಿನಲ್ಲಿ ಆರಾರು ರೊಟ್ಟಿಗಳಿರುವವು.


ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು