Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:26 - ಪರಿಶುದ್ದ ಬೈಬಲ್‌

26 ಬಳಿಕ ಮೋಶೆಯು ಚಿನ್ನದ ವೇದಿಕೆಯನ್ನು ದೇವದರ್ಶನಗುಡಾರದೊಳಗೆ ಇರಿಸಿದನು. ಅವನು ವೇದಿಕೆಯನ್ನು ಪರದೆಯ ಮುಂಭಾಗದಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರ ಆಜ್ಞಾಪಿಸಿದಂತೆ ಚಿನ್ನದ ಧೂಪವೇದಿಕೆಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಮುಂದೆ ಇಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮತ್ತು ಯೆಹೋವನು ಆಜ್ಞಾಪಿಸಿದಂತೆ ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಮುಂದೆ ಇಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ಪರದೆಯ ಮುಂದೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:26
9 ತಿಳಿವುಗಳ ಹೋಲಿಕೆ  

ಗುಡಾರದೊಳಗೆ ಧೂಪವನ್ನು ಅರ್ಪಿಸಲು ಬಂಗಾರದ ವೇದಿಕೆಯನ್ನು ಇಡು. ವೇದಿಕೆಯನ್ನು ಒಡಂಬಡಿಕೆಯ ಪೆಟ್ಟಿಗೆಯ ಮುಂದಿರಿಸು. ಬಳಿಕ ಪವಿತ್ರಗುಡಾರದ ಪ್ರವೇಶದಲ್ಲಿ ಪರದೆಯನ್ನು ಇರಿಸು.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಗಳನ್ನು ಮಾಡದಿರಲೆಂದು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಆದರೆ ಯಾರಾದರೂ ಪಾಪವನ್ನು ಮಾಡಿದರೆ ನಮಗೆ ಸಹಾಯ ಮಾಡಲು ಯೇಸು ಕ್ರಿಸ್ತನಿದ್ದಾನೆ. ನೀತಿವಂತನಾಗಿರುವ ಆತನು ತಂದೆಯಾದ ದೇವರ ಬಳಿಯಲ್ಲಿದ್ದಾನೆ.


ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಈ ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು.


ನೀವು ಕುರುಡರು. ನಿಮಗೇನೂ ಅರ್ಥವಾಗುವುದಿಲ್ಲ. ಯಾವುದು ಹೆಚ್ಚಿನದು? ಕಾಣಿಕೆಯೋ ಅಥವಾ ಯಜ್ಞವೇದಿಕೆಯೋ? ಕಾಣಿಕೆ ಪರಿಶುದ್ಧಗೊಂಡದ್ದು ಯಜ್ಞವೇದಿಕೆಯಿಂದಲೇ. ಆದ್ದರಿಂದ ಯಜ್ಞವೇದಿಕೆಯೇ ಹೆಚ್ಚಿನದು.


ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಮಹಾಪವಿತ್ರಸ್ಥಳದ ಪರದೆಯ ಮುಂಭಾಗದಲ್ಲಿರುವ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮಿಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು