ವಿಮೋಚನಕಾಂಡ 40:33 - ಪರಿಶುದ್ದ ಬೈಬಲ್33 ತರುವಾಯ ಮೋಶೆಯು ಪವಿತ್ರಗುಡಾರದ ಅಂಗಳದ ಸುತ್ತಲೂ ಪರದೆಗಳನ್ನು ನಿಲ್ಲಿಸಿದನು. ಮೋಶೆಯು ವೇದಿಕೆಯನ್ನು ಅಂಗಳದಲ್ಲಿರಿಸಿದನು. ಬಳಿಕ ಅವನು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿಸಿದನು. ಹೀಗೆ ಮೋಶೆ ಯೆಹೋವನು ತನಗೆ ಕೊಟ್ಟ ಎಲ್ಲಾ ಕೆಲಸವನ್ನು ಮಾಡಿ ಮುಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಗುಡಾರ ಹಾಗು ಬಲಿಪೀಠದ ಸುತ್ತಲು ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಮೋಶೆಯು ಗುಡಾರಕ್ಕೂ, ಬಲಿಪೀಠಕ್ಕೂ ಸುತ್ತಲೂ ಅಂಗಳವನ್ನು ನಿಲ್ಲಿಸಿ, ಅಂಗಳದ ಬಾಗಿಲಿನ ಪರದೆಯನ್ನು ತೂಗುಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು. ಅಧ್ಯಾಯವನ್ನು ನೋಡಿ |
ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.