ವಿಮೋಚನಕಾಂಡ 40:34 - ಪರಿಶುದ್ದ ಬೈಬಲ್34 ತರುವಾಯ ಮೋಡವು ದೇವದರ್ಶನಗುಡಾರವನ್ನು ಕವಿಯಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿಕೊಂಡಿತು. ಅಧ್ಯಾಯವನ್ನು ನೋಡಿ |
ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!
ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.