Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:10 - ಪರಿಶುದ್ದ ಬೈಬಲ್‌

10 ಆದ್ದರಿಂದ ಈಜಿಪ್ಟಿನ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳು ಮತ್ತು ಮೇಸ್ತ್ರಿಗಳು ಇಸ್ರೇಲರ ಬಳಿಗೆ ಬಂದು, “ಫರೋಹನು ಇಟ್ಟಿಗೆಗಳನ್ನು ಮಾಡಲು ನಿಮಗೆ ಹುಲ್ಲು ಕೊಡುವುದಿಲ್ಲವೆಂದು ತೀರ್ಮಾನಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಮತ್ತು ಅಧಿಕಾರಿಗಳೂ ಹೊರಗೆ ಹೋಗಿ ಆ ಜನರಿಗೆ, “ನಿಮಗೆ ಹುಲ್ಲನ್ನು ಕೊಡಬಾರದೆಂದು ಫರೋಹನ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಕೆಲಸದ ಮೇಲ್ವಿಚಾರಕರೂ ಮೇಸ್ತ್ರಿಗಳೂ ಆ ಜನರಿಗೆ, “ನಿಮಗೆ ಹುಲ್ಲು ಕೊಡಕೂಡದೆಂದು ಫರೋಹನ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಬಿಟ್ಟೀಮಾಡಿಸುವ ಅಧಿಕಾರಿಗಳೂ ಮೇಸ್ತ್ರಿಗಳೂ ಆ ಜನರಿಗೆ - ನಿಮಗೆ ಹುಲ್ಲನ್ನು ಕೊಡಕೂಡದೆಂದು ಫರೋಹನ ಅಪ್ಪಣೆಯಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಬಿಟ್ಟಿಕೆಲಸವನ್ನು ಮಾಡಿಸುವವರೂ ಮೇಲ್ವಿಚಾರಕರೂ ಹೊರಗೆ ಹೋಗಿ ಜನರಿಗೆ, “ಫರೋಹನು ಹೀಗೆ ಹೇಳುತ್ತಾನೆ: ‘ನಾನು ನಿಮಗೆ ಒಣಹುಲ್ಲು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:10
7 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.


ಅಧಿಪತಿಯು ಸುಳ್ಳುಮಾತುಗಳಿಗೆ ಕಿವಿಗೊಟ್ಟರೆ, ಅವನ ಅಧೀನದಲ್ಲಿರುವ ಅಧಿಕಾರಿಗಳೆಲ್ಲರು ಕೆಡುಕರಾಗುವರು.


ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.


ಅದೇ ದಿನ ಫರೋಹನು ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳಿಗೆ ಮತ್ತು ಮೇಸ್ತ್ರಿಗಳಿಗೆ,


ಈ ಜನರಿಗೆ ಇನ್ನೂ ಕಷ್ಟಕರವಾದ ಕೆಲಸವನ್ನು ಕೊಡಿರಿ. ಅವರು ಕಾರ್ಯಮಗ್ನರಾಗಿರುವಂತೆ ನೋಡಿಕೊಳ್ಳಿರಿ. ಆಗ ಅವರಿಗೆ ಮೋಶೆಯ ಸುಳ್ಳುಗಳನ್ನು ಕೇಳುವುದಕ್ಕೆ ಸಮಯವಿರುವುದಿಲ್ಲ” ಎಂದು ಹೇಳಿದನು.


ಆದ್ದರಿಂದ ನೀವೇ ಹೋಗಿ ಹುಲ್ಲನ್ನು ಕಂಡುಕೊಳ್ಳಿರಿ. ಆದರೆ ನೀವು ಮೊದಲು ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕು” ಎಂದು ಹೇಳಿದರು.


ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು