Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:2 - ಪರಿಶುದ್ದ ಬೈಬಲ್‌

2 ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದಕ್ಕೆ ಫರೋಹನು - ಯೆಹೋವನೆಂಬವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲ್ಯರನ್ನು ಹೋಗಗೊಡಿಸುವದೇಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ ಇಸ್ರಾಯೇಲ್ಯರು ಹೊರಟುಹೋಗುವದಕ್ಕೆ ನಾನು ಒಪ್ಪುವದೇ ಇಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:2
25 ತಿಳಿವುಗಳ ಹೋಲಿಕೆ  

“ಆದರೆ ಈಜಿಪ್ಟಿನ ರಾಜನು ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂಬುದು ನನಗೆ ಗೊತ್ತಿದೆ.


ದುಷ್ಟರು, ‘ಸರ್ವಶಕ್ತನಾದ ದೇವರು ಯಾರು? ನಾವು ಆತನ ಸೇವೆಮಾಡುವ ಅಗತ್ಯವಿಲ್ಲ! ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ’ ಎಂದು ಹೇಳುವರು.


ಬೇರೆ ಜನಾಂಗಗಳ ದೇವತೆಗಳು ಯಾವುದಾದರೂ ತಮ್ಮ ದೇಶವನ್ನು ನನ್ನಿಂದ ರಕ್ಷಿಸುತ್ತವೆಯೇ? ಇಲ್ಲ! ಜೆರುಸಲೇಮನ್ನು ಯೆಹೋವನು ನನ್ನಿಂದ ರಕ್ಷಿಸುತ್ತಾನೆಯೇ ಇಲ್ಲ!’”


ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.


ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.


“ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.


ಆ ದುಷ್ಟರು ಗರ್ವದಿಂದ ದೇವರನ್ನು ತೊರೆದುಬಿಡುವರು; ದುಷ್ಟಾಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು.


ಲೋಕದ ಜನರು ಆರಾಧಿಸಿದ ಮತ್ತು ಕೈಯಾರೆ ಮಾಡಿದ್ದ ದೇವರುಗಳನ್ನು ಜೆರುಸಲೇಮಿನ ದೇವರೊಂದಿಗೆ ಹೋಲಿಸಿ ಆತನ ವಿರುದ್ಧವಾಗಿ ಮಾತಾಡಿದರು.


ಹಿಜ್ಕೀಯನು ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ, ಅವನನ್ನು ನಂಬಬೇಡಿರಿ. ಯಾವ ದೇಶದ ದೇವರಿಗಾಗಲಿ ಅವನ ಜನರಿಗಾಗಲಿ ನನ್ನನ್ನು ನನ್ನ ಪೂರ್ವಿಕರನ್ನು ತಡೆಯಲು ಸಾಧ್ಯವಾಗಲಿಲ್ಲ. ನಿಮ್ಮ ದೇವರೂ ನನ್ನನ್ನು ತಡೆಯಲು ಸಾಧ್ಯವಿಲ್ಲ.’”


ಏಲಿಯ ಮಕ್ಕಳು ದುಷ್ಟರಾಗಿದ್ದರು. ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಆದ್ದರಿಂದ ಆತನೇ ಯೆಹೋವನೆಂದು ನಿನಗೆ ತಿಳಿಯಲೆಂದು ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಯುವೆನು; ಆ ನದಿಯ ನೀರು ರಕ್ತವಾಗುವುದು.


ಈ ಪೀಳಿಗೆಯವರೆಲ್ಲರು ಸತ್ತುಹೋದ ಮೇಲೆ ಮುಂದಿನ ಪೀಳಿಗೆಯು ಬೆಳೆಯಿತು. ಈ ಹೊಸ ಪೀಳಿಗೆಗೆ ಯೆಹೋವನ ಬಗ್ಗೆ ಮತ್ತು ಯೆಹೋವನು ಇಸ್ರೇಲಿನ ಜನರಿಗಾಗಿ ಮಾಡಿದ ಮಹತ್ಕಾರ್ಯಗಳ ಬಗ್ಗೆ ಏನೂ ಗೊತ್ತಿರಲಿಲ್ಲ.


ನನ್ನ ಪೂರ್ವಿಕರು ಆ ದೇಶಗಳನ್ನು ನಾಶಮಾಡಿದರು. ಯಾವ ದೇವರೂ ತನ್ನ ಜನರನ್ನು ನಾನು ನಾಶಮಾಡದಂತೆ ನನ್ನನ್ನು ತಡೆಯಲು ಸಾಧ್ಯವಿಲ್ಲ. ನಿಮ್ಮ ದೇವರು ನನ್ನಿಂದ ನಿಮ್ಮನ್ನು ಕಾಪಾಡುವನು ಎಂದು ನೀವು ನೆನಸುತ್ತೀರೋ?


ಫರೋಹನಿಗೂ ಅವನ ಅಧಿಕಾರಿಗಳಿಗೂ ಅವನ ಜನರಿಗೂ ವಿರೋಧವಾಗಿ ನೀನು ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದೆ. ಈಜಿಪ್ಟಿನವರು ತಮ್ಮನ್ನು ನಮ್ಮ ಪೂರ್ವಿಕರಿಗಿಂತ ಉತ್ತಮರೆಂದು ಭಾವಿಸಿಕೊಂಡದ್ದು ನಿನಗೆ ಗೊತ್ತಿತ್ತು. ಆದರೆ ನೀನು ಎಂಥಾ ಮಹಾ ವ್ಯಕ್ತಿಯೆಂದು ಅವರಿಗೆ ರುಜುವಾತುಪಡಿಸಿದೆ! ಅದನ್ನು ಈಗಲೂ ಅವರು ನೆನಪು ಮಾಡುತ್ತಿರುತ್ತಾರೆ.


ಆದರೆ ‘ನಾವು ಯೆಹೂದದಲ್ಲಿ ವಾಸಿಸುವದಿಲ್ಲ’ವೆಂದು ನೀವು ಹೇಳಬಹುದು. ನೀವು ಹಾಗೆ ಹೇಳಿದರೆ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮೀರಿದಂತಾಗುತ್ತದೆ.


ತಾನು ಯೆಹೋವನಿಗಿಂತ ಬಹಳ ಮುಖ್ಯವಾದವನೆಂದು ಮೋವಾಬು ಭಾವಿಸಿತ್ತು. ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಬನ್ನು ದಂಡಿಸಿರಿ. ಮೋವಾಬು ತನ್ನ ವಾಂತಿಯಲ್ಲಿ ಬಿದ್ದು ಹೊರಳಾಡುವದು. ಜನರು ಮೋವಾಬನ್ನು ತಮಾಷೆ ಮಾಡುವರು.


ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.


ಆದರೆ ನಾಬಾಲನು ಅವರನ್ನು ಕೀಳಾಗಿ ಕಂಡು, “ದಾವೀದನು ಯಾರು? ಈ ಇಷಯನ ಮಗನೆಂಬವನು ಯಾರು? ಇತ್ತೀಚಿನ ದಿನಗಳಲ್ಲಿ ತಮ್ಮ ಒಡೆಯರ ಹತ್ತಿರದಿಂದ ಓಡಿ ಹೋಗಿರುವ ಅನೇಕ ಗುಲಾಮರುಗಳಿದ್ದಾರೆ!


ಯಾಕೆಂದರೆ ದುಷ್ಟನು ದೇವರಿಗೆ ವಿರುದ್ಧವಾಗಿ ತನ್ನ ಕೈಯನ್ನು ಝಳಪಿಸುತ್ತಾನೆ. ದುಷ್ಟನು ಸರ್ವಶಕ್ತನಾದ ದೇವರ ವಿರುದ್ಧವಾಗಿ ಮಹಾಶೂರನಂತೆ ಆಕ್ರಮಣ ಮಾಡುವನು.


ಅವನು ಬಹು ಮೊಂಡನಾಗಿದ್ದಾನೆ. ದುಷ್ಟನು ಮಹಾಗುರಾಣಿಯನ್ನು ಹಿಡಿದು ದೇವರನ್ನು ಎದುರಿಸಲು ಪ್ರಯತ್ನಿಸುವನು.


ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”


ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು