ವಿಮೋಚನಕಾಂಡ 5:23 - ಪರಿಶುದ್ದ ಬೈಬಲ್23 ನಾನು ಫರೋಹನ ಬಳಿಗೆ ಹೋಗಿ ನೀನು ಹೇಳಿದ್ದನ್ನೇ ತಿಳಿಸಿದೆ. ಆದರೆ ಅಂದಿನಿಂದ ಅವನು ಜನರನ್ನು ಕೀಳಾಗಿ ಕಾಣುತ್ತಿದ್ದಾನೆ. ಅಲ್ಲದೆ ನೀನೂ ನಿನ್ನ ಜನರಿಗೆ ಸಹಾಯ ಮಾಡುತ್ತಿಲ್ಲ” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲಿಲ್ಲವಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾನು ಫರೋಹನ ಬಳಿಗೆ ಹೋಗಿ ನಿಮ್ಮ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀವಾದರೋ ಅವರನ್ನು ಬಿಡುಗಡೆ ಮಾಡಲು ಏನನ್ನೂ ಮಾಡಿಲ್ಲ,” ಎಂದು ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಾನಲ್ಲಾ; ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲೇ ಇಲ್ಲ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾನು ಫರೋಹನ ಬಳಿಗೆ ಬಂದು ನಿಮ್ಮ ಹೆಸರಿನಲ್ಲಿ ಮಾತನಾಡಿದಂದಿನಿಂದ, ಈ ಜನರಿಗೆ ಅವನು ಕೇಡನ್ನೇ ಮಾಡುತ್ತಿದ್ದಾನೆ. ನೀವು ನಿಮ್ಮ ಜನರನ್ನು ರಕ್ಷಿಸಲಿಲ್ಲವಲ್ಲಾ,” ಎಂದನು. ಅಧ್ಯಾಯವನ್ನು ನೋಡಿ |