Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:8 - ಪರಿಶುದ್ದ ಬೈಬಲ್‌

8 ಆದರೂ ಅವರು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲೂ ಮಾಡಬೇಕು. ಅವರು ಸೋಮಾರಿಗಳಾಗಿದ್ದಾರೆ. ಆದಕಾರಣ ತಮ್ಮನ್ನು ಹೋಗಬಿಡಬೇಕೆಂದು ಕೇಳುತ್ತಿದ್ದಾರೆ. ಅವರಿಗೆ ಸಾಕಷ್ಟು ಕೆಲಸವಿಲ್ಲ. ಆದ್ದರಿಂದ ತಮ್ಮ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಹೋಗಗೊಡಿಸಬೇಕೆಂದು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಇಟ್ಟಿಗೆಗಳ ಲೆಕ್ಕವನ್ನು ಎಂದಿನಂತೆ ಒಪ್ಪಿಸಲಿ.ಅದನ್ನು ಕಡಿಮೆ ಮಾಡಕೂಡದು. ಇವರು ಮೈಗಳ್ಳರು. ಆದ್ದರಿಂದಲೇ, ‘ನಾವು ಹೋಗಿ ನಮ್ಮ ದೇವರಿಗೆ ಬಲಿಯರ್ಪಿಸಿ ಬರುವುದಕ್ಕೆ ಅಪ್ಪಣೆಯಾಗಬೇಕು,’ ಎಂದು ಬೊಬ್ಬೆಹಾಕುತ್ತಾ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕವನ್ನು ಮುಂದೆಯೂ ಒಪ್ಪಿಸಬೇಕು; ಅದನ್ನು ಕಡಿಮೆಮಾಡಕೂಡದು. ಅವರು ಮೈಗಳ್ಳರಾದದರಿಂದ - ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಮಾಡಿ ಬರುವದಕ್ಕೆ ಅಪ್ಪಣೆಯಾಗಬೇಕೆಂದು ಕೂಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದ್ದರಿಂದ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಅರ್ಪಿಸೋಣ,’ ಎಂದು ಕೂಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:8
6 ತಿಳಿವುಗಳ ಹೋಲಿಕೆ  

ಆತನು ತನ್ನ ಜನರನ್ನು ಅನ್ಯಜನಾಂಗಗಳಿಗೆ ಒಪ್ಪಿಸಿದನು; ಅವರ ಮೇಲೆ ದೊರೆತನ ಮಾಡುವಂತೆ ವೈರಿಗಳಿಗೆ ಅವರನ್ನು ಬಿಟ್ಟುಕೊಟ್ಟನು.


“ಇಟ್ಟಿಗೆಗಳನ್ನು ಮಾಡುವುದಕ್ಕೆ ಬೇಕಾದ ಹುಲ್ಲನ್ನು ನೀವು ಜನರಿಗೆ ಇಲ್ಲಿಯವರೆಗೆ ಕೊಟ್ಟಿದ್ದೀರಿ. ಆದರೆ ಈಗ ಇಟ್ಟಿಗೆಗಳನ್ನು ಮಾಡಲು ಅವರೇ ಹುಲ್ಲನ್ನು ಕಂಡುಕೊಳ್ಳಬೇಕೆಂದು ಅವರಿಗೆ ಹೇಳಿರಿ.


ಈ ಜನರಿಗೆ ಇನ್ನೂ ಕಷ್ಟಕರವಾದ ಕೆಲಸವನ್ನು ಕೊಡಿರಿ. ಅವರು ಕಾರ್ಯಮಗ್ನರಾಗಿರುವಂತೆ ನೋಡಿಕೊಳ್ಳಿರಿ. ಆಗ ಅವರಿಗೆ ಮೋಶೆಯ ಸುಳ್ಳುಗಳನ್ನು ಕೇಳುವುದಕ್ಕೆ ಸಮಯವಿರುವುದಿಲ್ಲ” ಎಂದು ಹೇಳಿದನು.


ಫರೋಹನು, “ನೀವು ಸೋಮಾರಿಗಳು. ನಿಮಗೆ ಕೆಲಸ ಮಾಡಲು ಇಷ್ಟವಿಲ್ಲ. ಆದ್ದರಿಂದ ನಿಮ್ಮನ್ನು ಹೋಗಗೊಡಿಸಬೇಕೆಂದು ನೀವು ನನ್ನನ್ನು ಕೇಳುತ್ತೀರಿ. ಇಲ್ಲಿಂದ ಹೊರಟುಹೋಗಿ ಯೆಹೋವನಿಗೆ ಯಜ್ಞಗಳನ್ನು ಮಾಡಬೇಕೆಂದು ಅಪೇಕ್ಷಿಸುತ್ತೀರಿ.


ಇಬ್ರಿಯ ಮೇಸ್ತ್ರಿಗಳಿಗೆ ತಾವು ತೊಂದರೆಯಲ್ಲಿದ್ದೇವೆಂದು ತಿಳಿಯಿತು. ತಾವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ತಮ್ಮಿಂದ ಮಾಡಲಾಗುವುದಿಲ್ಲವೆಂದು ಅವರಿಗೆ ಗೊತ್ತಿತ್ತು.


ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು