ವಿಮೋಚನಕಾಂಡ 6:23 - ಪರಿಶುದ್ದ ಬೈಬಲ್23 ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದಾಬನ ಮಗಳು ಮತ್ತು ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆದ ಎಲೀಶೇಬಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆರೋನನು ಅಮ್ಮೀನಾದಾಬನ ಮಗಳಾಗಿಯೂ ನಹಶೋನನ ತಂಗಿಯಾಗಿಯೂ ಇರುವ ಎಲೀಶೇಬಳನ್ನು ಮದುವೆ ಮಾಡಿಕೊಂಡನು; ಆಕೆಯಲ್ಲಿ ಅವನಿಗೆ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬಿವರು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬಳನ್ನು ಮದುವೆಯಾದನು. ಆಕೆಯು ಅವನಿಗೆ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಇವರನ್ನು ಹೆತ್ತಳು. ಅಧ್ಯಾಯವನ್ನು ನೋಡಿ |
ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ.
ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.