Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:25 - ಪರಿಶುದ್ದ ಬೈಬಲ್‌

25 ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಗಳನ್ನು ಮದುವೆಯಾದನು; ಆಕೆ ಫೀನೆಹಾಸನಿಗೆ ಜನ್ಮವಿತ್ತಳು. ಇವರೆಲ್ಲರೂ ಇಸ್ರೇಲನ ಮಗನಾದ ಲೇವಿಯ ಗೋತ್ರದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಫಿನೇಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳೊಳಗೆ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆರೋನನ ಮಗ ಎಲಿಯಾಜರನು ಪೂಟಿಯೇಲನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಯಾದನು. ಆಕೆಯು ಅವನಿಗೆ ಫೀನೆಹಾಸನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿಯರ ಗೋತ್ರಗಳ ಮುಖ್ಯಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:25
9 ತಿಳಿವುಗಳ ಹೋಲಿಕೆ  

ಆರೋನನ ಮಗನಾದ ಎಲ್ಲಾಜಾರನು ಮರಣಹೊಂದಿದನು. ಗಿಬೇತ್‌ನಲ್ಲಿ ಎಲ್ಲಾಜಾರನನ್ನು ಸಮಾಧಿ ಮಾಡಲಾಯಿತು. ಗಿಬೇತ್ ಊರು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿತ್ತು. ಆ ಊರನ್ನು ಎಲ್ಲಾಜಾರನ ಮಗನಾದ ಫೀನೆಹಾಸನಿಗೆ ಕೊಡಲಾಗಿತ್ತು.


ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.


ಆದರೆ ಮೊದಲು ಇಸ್ರೇಲರು ರೂಬೇನ್ಯರ, ಗಾದ್ಯರ, ಮನಸ್ಸೆಕುಲದ ಅರ್ಧಜನರ ಸಂಗಡ ಮಾತನಾಡಲು ಕೆಲವು ಜನರನ್ನು ಕಳುಹಿಸಿದರು. ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನ ನೇತೃತ್ವದಲ್ಲಿ ಪ್ರತಿಯೊಂದು ಕುಲದಿಂದ ಒಬ್ಬೊಬ್ಬ ವ್ಯಕ್ತಿಯಂತೆ ಹತ್ತು ಜನರನ್ನು ಕಳುಹಿಸಿದರು. ಈ ಹತ್ತು ಜನರು ತಮ್ಮ ಕುಲಗಳ ಮುಖ್ಯ ನಾಯಕರಾಗಿದ್ದರು.


ಮೋಶೆಯು ಅವರನ್ನು ಯುದ್ಧಕ್ಕೆ ಕಳುಹಿಸಿದನು. ಅವರ ಸಂಗಡ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಕಳುಹಿಸಿದನು. ಫೀನೆಹಾಸನು ಪವಿತ್ರವಸ್ತುಗಳನ್ನು ತೆಗೆದುಕೊಂಡನು ಮತ್ತು ಸೂಚನೆ ಕೊಡುವುದಕ್ಕಾಗಿ ತುತ್ತೂರಿಗಳನ್ನು ತೆಗೆದುಕೊಂಡನು.


ಲೇವಿಯರೊಳಗಿನ ಕುಲಗಳನ್ನು ಲೆಕ್ಕಿಸಲಾಗಿ, ಅವರಲ್ಲಿನ ಕುಟುಂಬಗಳು: ಗೇರ್ಷೋನನ ಕುಟುಂಬದವರಾದ ಗೇರ್ಷೋನ್ಯರು; ಕೆಹಾತನ ಕುಟುಂಬದವರಾದ ಕೆಹಾತ್ಯರು; ಮೆರಾರೀಯ ಕುಟುಂಬದವರಾದ ಮೆರಾರೀಯರು.


ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾಜಾರನ ಮಗನು. ಎಲ್ಲಾಜಾರನು ಪ್ರಧಾನಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು